Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:24 - ಪರಿಶುದ್ದ ಬೈಬಲ್‌

24 “ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅರ್ನೋನ್ ಕಣಿವೆಯನ್ನು ದಾಟಲು ಸಿದ್ಧಪಡಿಸಿಕೊ. ಅಮೋರಿಯನೂ ಹೆಷ್ಬೋನಿನ ರಾಜನೂ ಆಗಿರುವ ಸೀಹೋನನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುವೆನು. ಅವನ ರಾಜ್ಯವನ್ನು ನಾನು ನಿನಗೆ ಕೊಡುವೆನು. ಆದುದರಿಂದ ಅವನಿಗೆ ವಿರುದ್ಧವಾಗಿ ಯುದ್ಧಮಾಡಿ ದೇಶವನ್ನು ಸ್ವಾಧೀನಪಡಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸ ಸೀಹೋನನು ನಿಮ್ಮಿಂದ ಸೋತುಹೋಗಿ ಅವನ ರಾಜ್ಯ ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತು ಹೋಗಿ ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರಾರಂಭಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಈಗ ಏಳಿರಿ, ಹೊರಡಿರಿ, ಅರ್ನೋನ್ ಹಳ್ಳವನ್ನು ದಾಟಿರಿ, ಇಗೋ, ಹೆಷ್ಬೋನಿನ ಅರಸ ಅಮೋರಿಯನಾದ ಸೀಹೋನನನ್ನೂ, ಅವನ ದೇಶವನ್ನೂ ನಿಮ್ಮ ಕೈಯಲ್ಲಿ ಕೊಟ್ಟಿದ್ದೇನೆ. ಅವನ ಸಂಗಡ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆರಂಭಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:24
11 ತಿಳಿವುಗಳ ಹೋಲಿಕೆ  

“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.


ದೇವರು ನಿನಗೆ ಅಧಿಕಾರವನ್ನು ಕೊಟ್ಟಿದ್ದಾನೆ. ಆ ದೇವರು ನಿನ್ನನ್ನು ಎಲ್ಲೆಡೆಯಲ್ಲಿರುವ ಜನರ ಮೇಲೆ, ಕಾಡುಪ್ರಾಣಿಗಳ ಮೇಲೆ, ಪಕ್ಷಿಗಳ ಮೇಲೆ ಆಳುವಂತೆ ಮಾಡಿದ್ದಾನೆ. ಅರಸನಾದ ನೆಬೂಕದ್ನೆಚ್ಚರನೇ, ನೀನೇ ಆ ಪ್ರತಿಮೆಯ ಬಂಗಾರದ ತಲೆ.


ನೆಬೂಕದ್ನೆಚ್ಚರನು ಪ್ರಯಾಸದ ಕೆಲಸ ಮಾಡಿದ್ದರಿಂದ ನಾನು ಅವನಿಗೆ ಪ್ರತಿಫಲವಾಗಿ ಈಜಿಪ್ಟ್ ದೇಶವನ್ನು ಕೊಟ್ಟೆನು. ಯಾಕೆಂದರೆ ಅವರು ನನಗೋಸ್ಕರ ಪ್ರಯಾಸಪಟ್ಟರು.” ಇದು ಒಡೆಯನಾದ ಯೆಹೋವನ ನುಡಿ.


ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು.


ಪಾರಸಿ ರಾಜನಾದ ಕೋರೆಷನು ತಿಳಿಸುವದೇನೆಂದರೆ: ಪರಲೋಕದಲ್ಲಿರುವ ದೇವರಾದ ಯೆಹೋವನು ನನ್ನನ್ನು ಇಡೀ ಭೂಮಿಗೆ ಅರಸನನ್ನಾಗಿ ಮಾಡಿದ್ದಾನೆ. ಆತನು ಜೆರುಸಲೇಮಿನಲ್ಲಿರುವ ತನ್ನ ಆಲಯವನ್ನು ತಿರುಗಿ ಕಟ್ಟುವ ಜವಾಬ್ದಾರಿಕೆಯನ್ನು ನನಗೆ ಕೊಟ್ಟಿರುತ್ತಾನೆ. ಆದ್ದರಿಂದ ದೇವರ ಜನರೆಲ್ಲಾ ಜೆರುಸಲೇಮಿಗೆ ಹಿಂತಿರುಗಿ ಹೋಗಬಹುದು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗೆ ಇರಲಿ.


ಏಳನೆಯ ಸಲ ಅವರು ನಗರವನ್ನು ಸುತ್ತುವಾಗ ಯಾಜಕರು ತುತ್ತೂರಿಗಳನ್ನು ಊದಿದರು. ಆಗ ಯೆಹೋಶುವನು ಜನರಿಗೆ, “ಈಗ ಆರ್ಭಟಿಸಿರಿ, ಯೆಹೋವನು ಈ ನಗರವನ್ನು ನಿಮಗೆ ಕೊಟ್ಟಿದ್ದಾನೆ.


ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.


“ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: “ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.


ಬಳಿಕ ಜನರು ಅಲ್ಲಿಂದ ಹೊರಟು ಜೆರೆದ್ ಕಣಿವೆಗೆ ಪ್ರಯಾಣ ಮಾಡಿ ಅಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು