Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:30 - ಪರಿಶುದ್ದ ಬೈಬಲ್‌

30 “ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:30
14 ತಿಳಿವುಗಳ ಹೋಲಿಕೆ  

ಆದರೆ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ದೇಶದ ಮೂಲಕ ಹಾದುಹೋಗಲು ಬಿಡಲಿಲ್ಲ. ಅರಸನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಮರುಭೂಮಿಯ ಕಡೆಗೆ ಹೊರಟನು. ಅವನು ಯಹಜ್ ಎಂಬಲ್ಲಿಗೆ ಬಂದನು; ಅಲ್ಲಿ ರಾಜನ ಸೈನ್ಯವು ಇಸ್ರೇಲರಿಗೆ ವಿರೋಧವಾಗಿ ಯುದ್ಧಮಾಡಿತು.


ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.


ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು.


ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.


ಆದರೆ ಅಮೋರಿಯರ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ಪ್ರದೇಶದ ಸೀಮೆಯನ್ನು ದಾಟಲು ಬಿಡಲಿಲ್ಲ. ಸೀಹೋನನು ತನ್ನ ಜನರನ್ನೆಲ್ಲಾ ಸೇರಿಸಿ ಯಹಚದಲ್ಲಿ ಪಾಳೆಯಮಾಡಿಕೊಂಡನು. ಅಮೋರಿಯರು ಇಸ್ರೇಲರೊಂದಿಗೆ ಯುದ್ಧಮಾಡಿದರು.


“ಯೆಹೋವನು ನನಗೆ, ‘ನಾನು ನಿನಗೆ ಸೀಹೋನನನ್ನೂ ಅವನ ಎಲ್ಲಾ ಜನರನ್ನೂ ಅವನ ದೇಶವನ್ನೂ ನಿನಗೆ ಕೊಡುತ್ತೇನೆ. ಈಗ ಹೋಗಿ ಅವನ ದೇಶವನ್ನು ವಶಪಡಿಸಿಕೊ!’ ಎಂದು ಹೇಳಿದನು.


ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.


ಅವರ ಹೃದಯವನ್ನು ಕಠಿಣಗೊಳಿಸು! ಬಳಿಕ ಅವರನ್ನು ಶಪಿಸು!


ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯ ಮೊಂಡಾಗಿದೆ; ಅವನು ಜನರನ್ನು ಹೋಗಗೊಡಿಸುವುದಿಲ್ಲ.


ಬಳಿಕ ಇಸ್ರೇಲರು ಬೇರೆ ದಿಕ್ಕಿಗೆ ತಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣಮಾಡಿದರು. ಆಗ ಬಾಷಾನಿನ ಅರಸನಾದ ಓಗನು ಎದ್ರೈ ಎಂಬಲ್ಲಿ ಇಸ್ರೇಲರೊಂದಿಗೆ ಯುದ್ಧಮಾಡಲು ತನ್ನ ಸೈನ್ಯ ಸಮೇತವಾಗಿ ಬಂದನು.


ಆದರೆ ಯೆಹೋವನು ಮೋಶೆಗೆ, “ಆ ಅರಸನಿಗೆ ಹೆದರಬೇಡ. ನೀನು ಅವನನ್ನು ಸೋಲಿಸುವಂತೆ ಮಾಡುವೆನು. ನೀನು ಅವನ ಸೈನ್ಯವನ್ನು ಮತ್ತು ಅವನ ದೇಶವನ್ನು ಪೂರ್ಣವಾಗಿ ವಶಪಡಿಸಿಕೊಳ್ಳುವೆ. ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದಂತೆ ಇವನಿಗೂ ಸಹ ಮಾಡುವಿರಿ” ಅಂದನು.


ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು