Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:37 - ಪರಿಶುದ್ದ ಬೈಬಲ್‌

37 ಆದರೆ ಅಮ್ಮೋನಿಯರಿಗೆ ಸೇರಿದ ದೇಶದ ಸಮೀಪಕ್ಕೆ ನಾವು ಹೋಗಲಿಲ್ಲ: ಯಬ್ಬೋಕ್ ನದಿಯ ಬದಿಗೂ ನಾವು ಹೋಗಲಿಲ್ಲ: ಬೆಟ್ಟಪ್ರದೇಶಗಳ ಪಟ್ಟಣಗಳಿಗೂ ನಾವು ಹೋಗಲಿಲ್ಲ: ನಮ್ಮ ದೇವರಾದ ಯೆಹೋವನು ನಮಗೆ ಕೊಡದೆ ಇರುವ ದೇಶಗಳ ಬಳಿಗೆ ನಾವು ಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅಮ್ಮೋನಿಯರ ನಾಡನ್ನು ಮಾತ್ರ, ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶ ಮತ್ತು ಮಲೆನಾಡಿನ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರವಿುಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅಮ್ಮೋನಿಯರ ದೇಶದ ಯಬ್ಬೋಕ್ ನದಿಯ ಬಳಿಯಲ್ಲಿರುವ ಸ್ಥಳವನ್ನೂ ಪರ್ವತ ಪಟ್ಟಣವನ್ನೂ ನಮ್ಮ ದೇವರಾದ ಯೆಹೋವ ದೇವರು ನಮಗೆ ಬೇಡವೆಂದ ಕಾರಣ, ಆ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:37
9 ತಿಳಿವುಗಳ ಹೋಲಿಕೆ  

ರೂಬೇನ್ ಮತ್ತು ಗಾದ್ ಕುಲಗಳವರಿಗೆ ಗಿಲ್ಯಾದಿನಿಂದ ಪ್ರಾರಂಭವಾಗುವ ಪ್ರಾಂತ್ಯವನ್ನು ಕೊಟ್ಟೆನು. ಇದು ಅರ್ನೋನ್ ಕಣಿವೆಯಿಂದಿಡಿದು ಯಬ್ಬೋಕ್ ಹೊಳೆಯ ತನಕ ವಿಸ್ತಾರವಾಗಿದೆ. ಯಬ್ಬೋಕ್ ಹೊಳೆಯು ಅಮ್ಮೋನಿಯರ ಮೇರೆಯಾಗಿದೆ.


ಆದರೆ ಇಸ್ರೇಲರು ಅರಸನನ್ನು ಕೊಂದುಹಾಕಿದರು. ಬಳಿಕ ಅವರು ಅರ್ನೋನ್ ನದಿಯಿಂದ ಹಿಡಿದು ಯಬ್ಬೋಕ್ ನದಿಯವರೆಗಿರುವ ಅವನ ಭೂಮಿಯನ್ನು ವಶಪಡಿಸಿಕೊಂಡರು. ಅವರು ಅಮ್ಮೋನಿಯರ ಮೇರೆಯವರೆಗಿರುವ ಪ್ರದೇಶವನ್ನೆಲ್ಲಾ ವಶಪಡಿಸಿಕೊಂಡರು. ಅಮ್ಮೋನಿಯರು ತಮ್ಮ ಗಡಿಯನ್ನು ಭದ್ರವಾಗಿ ರಕ್ಷಿಸಿಕೊಂಡದ್ದರಿಂದ ಇಸ್ರೇಲರು ಮುಂದಕ್ಕೆ ಹೋಗಲಿಲ್ಲ.


ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು.


ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’”


ಅವರು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದರು. ಅವನು ಅರ್ನೋನ್ ನದಿಯ ತೀರದಲ್ಲಿದ್ದ ಅರೋಯೇರ್‌ನಿಂದ ಯಬ್ಬೋಕ್ ನದಿಯವರೆಗಿರುವ ಪ್ರದೇಶವನ್ನು ಆಳುತ್ತಿದ್ದನು. ಅವನ ರಾಜ್ಯವು ಆ ತಗ್ಗು ಪ್ರದೇಶದ ಮಧ್ಯದಿಂದ ಪ್ರಾರಂಭವಾಗುತ್ತಿತ್ತು. ಇದು ಅಮ್ಮೋನಿಯರ ಪ್ರದೇಶಕ್ಕೂ ಮೇರೆಯಾಗಿತ್ತು. ಗಿಲ್ಯಾದಿನ ಅರ್ಧ ಪ್ರದೇಶವು ಸೀಹೋನನ ಆಳ್ವಿಕೆಗೆ ಒಳಗಾಗಿತ್ತು.


ಅವರು ಈ ಸಂದೇಶವನ್ನು ತೆಗೆದುಕೊಂಡು ಹೋದರು: “ಯೆಫ್ತಾಹನು ಹೇಳುವುದೇನೆಂದರೆ: ಇಸ್ರೇಲರು ಮೋವಾಬ್ಯರ ಪ್ರದೇಶವನ್ನಾಗಲಿ ಅಮ್ಮೋನಿಯರ ಪ್ರದೇಶವನ್ನಾಗಲಿ ತೆಗೆದುಕೊಳ್ಳಲಿಲ್ಲ.


“ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”


ಅವರ ವಿರುದ್ಧ ಯುದ್ಧ ಮಾಡಬಾರದು. ನಾನು ನಿಮಗೆ ಅವರ ದೇಶದಲ್ಲಿ ಯಾವ ಪಾಲನ್ನೂ ಕೊಡುವುದಿಲ್ಲ. ಅದರ ಒಂದು ಅಡಿ ಜಾಗವನ್ನೂ ಕೊಡುವುದಿಲ್ಲ. ಯಾಕೆಂದರೆ ಸೇಯೀರ್ ಬೆಟ್ಟಪ್ರದೇಶವನ್ನು ಏಸಾವನ ಸ್ವಂತ ದೇಶವನ್ನಾಗಿ ಕೊಟ್ಟಿರುತ್ತೇನೆ.


ಇಸ್ರೇಲರು ಅಮೋರಿಯರ ಎಲ್ಲ ಪ್ರದೇಶವನ್ನು ತೆಗೆದುಕೊಂಡರು. ಆ ಪ್ರದೇಶವು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಅರಣ್ಯದಿಂದ ಜೋರ್ಡನ್ ನದಿಯವರೆಗೂ ಹಬ್ಬಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು