ಧರ್ಮೋಪದೇಶಕಾಂಡ 2:4 - ಪರಿಶುದ್ದ ಬೈಬಲ್4 ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು; ಸೇಯೀರ್ ನಾಡಿನಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ನಾಡನ್ನು ದಾಟುವುದಕ್ಕಿದ್ದೀರಿ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವದಕ್ಕಿದ್ದೀರಷ್ಟೆ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು. ಅಧ್ಯಾಯವನ್ನು ನೋಡಿ |