ಧರ್ಮೋಪದೇಶಕಾಂಡ 2:5 - ಪರಿಶುದ್ದ ಬೈಬಲ್5 ಅವರ ವಿರುದ್ಧ ಯುದ್ಧ ಮಾಡಬಾರದು. ನಾನು ನಿಮಗೆ ಅವರ ದೇಶದಲ್ಲಿ ಯಾವ ಪಾಲನ್ನೂ ಕೊಡುವುದಿಲ್ಲ. ಅದರ ಒಂದು ಅಡಿ ಜಾಗವನ್ನೂ ಕೊಡುವುದಿಲ್ಲ. ಯಾಕೆಂದರೆ ಸೇಯೀರ್ ಬೆಟ್ಟಪ್ರದೇಶವನ್ನು ಏಸಾವನ ಸ್ವಂತ ದೇಶವನ್ನಾಗಿ ಕೊಟ್ಟಿರುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾನು ಸೇಯೀರ್ ಮಲೆನಾಡನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿದ್ದೇನೆ. ಆದುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ಸೇಯೀರ್‍ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.