ಧರ್ಮೋಪದೇಶಕಾಂಡ 2:8 - ಪರಿಶುದ್ದ ಬೈಬಲ್8 “ಹಾಗೆ ನಾವು ನಮ್ಮ ಸಂಬಂಧಿಕರಾದ ಏಸಾವನ ಜನರ ದೇಶದ ಮೂಲಕ ಪ್ರಯಾಣ ಬೆಳೆಸಿದೆವು. ಜೋರ್ಡನ್ ಕಣಿವೆಯಿಂದ ಏಲತ್ ಮತ್ತು ಎಚ್ಯೋನ್ಗೆಬೆರ್ ಪಟ್ಟಣಗಳಿಗೆ ಹೋಗುವ ಮಾರ್ಗವನ್ನು ಬಿಟ್ಟು, ನಾವು ಮೋವಾಬ್ ದೇಶದ ಮರುಭೂಮಿಗೆ ಹೋಗುವ ರಸ್ತೆಯಲ್ಲಿ ನಡೆದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರ ಕಡೆಯಿಂದ ಓರೆಯಾಗಿ ಪ್ರಯಾಣಮಾಡಿ ಅರಾಬದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈ ಪ್ರಕಾರ ನಾವು ಸೇಯೀರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬಾದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ, ಮೋವಾಬಿನ ಮರುಭೂಮಿಯ ಮಾರ್ಗವಾಗಿ ಹಾದು ಹೋದೆವು. ಅಧ್ಯಾಯವನ್ನು ನೋಡಿ |