ಧರ್ಮೋಪದೇಶಕಾಂಡ 20:16 - ಪರಿಶುದ್ದ ಬೈಬಲ್16 “ಆದರೆ ನಿಮಗೆ ವಾಗ್ದಾನ ಮಾಡಿದ ದೇಶದ ಪಟ್ಟಣಗಳನ್ನು ಸ್ವಾಧೀನ ಮಾಡುವಾಗ ನೀವು ಪಟ್ಟಣದಲ್ಲಿರುವವರೆಲ್ಲರನ್ನು ಕೊಲ್ಲಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸುರುಬಿಡುವ ಒಬ್ಬರನ್ನಾದರೂ ಉಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಈ ಜನರ ಪಟ್ಟಣಗಳಲ್ಲಿ ಉಸಿರಾಡುವ ಯಾವುದನ್ನಾದರೂ ಉಳಿಸಬಾರದು. ಅಧ್ಯಾಯವನ್ನು ನೋಡಿ |
ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.