ಧರ್ಮೋಪದೇಶಕಾಂಡ 20:18 - ಪರಿಶುದ್ದ ಬೈಬಲ್18 ಯಾಕೆಂದರೆ ಆಗ ಅವರು ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ; ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಮಾಡುವ ಭಯಂಕರ ಕೃತ್ಯಗಳನ್ನು ಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಡಬಹುದು; ಮತ್ತು ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಆರಾಧಿಸುವಾಗ ಮಾಡಿದ ಎಲ್ಲಾ ಅಸಹ್ಯಕರವಾದ ಆಚಾರಗಳನ್ನು ನಿಮಗೆ ಕಲಿಸಿಕೊಡಬಹುದು ಮತ್ತು ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ದ್ರೋಹಿಗಳಾಗಬಹುದು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.