Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:20 - ಪರಿಶುದ್ದ ಬೈಬಲ್‌

20 ಹಣ್ಣುಗಳನ್ನು ಕೊಡದ ಮರಗಳನ್ನು ಕಡಿಯಬಹುದು. ಆ ಮರಗಳಿಂದ ಆಯುಧಗಳನ್ನು ತಯಾರಿಸಿ ಆ ಪಟ್ಟಣದ ಜನರೊಂದಿಗೆ ಯುದ್ಧ ಮಾಡಬಹುದು. ಆ ಪಟ್ಟಣವು ನಿಮ್ಮ ಕೈವಶವಾಗುವ ತನಕ ನೀವು ಅದನ್ನು ಉಪಯೋಗಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಳುಮಾಡಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧ ಆಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತಿನ್ನತಕ್ಕ ಹಣ್ಣು ಕೊಡುವದಿಲ್ಲವೆಂದು ನೀವು ತಿಳಿದ ಮರಗಳನ್ನು ಮಾತ್ರ ನೀವು ಕೆಡಿಸಬಹುದು, ಕಡಿಯಬಹುದು. ಅವುಗಳಿಂದ ಯುದ್ಧಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಕಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:20
10 ತಿಳಿವುಗಳ ಹೋಲಿಕೆ  

ಈಜಿಪ್ಟಿನ ರಾಜನು ಯೆಹೂದದ ರಾಜನನ್ನು ರಕ್ಷಿಸಲು ಸಾಧ್ಯವಿಲ್ಲ. ಅವನು ಬಹಳ ಸೈನಿಕರನ್ನು ಕಳುಹಿಸಬಹುದು, ಆದರೆ ಈಜಿಪ್ಟಿನ ಶಕ್ತಿಯು ಯೆಹೂದವನ್ನು ರಕ್ಷಿಸಲಾರದು. ನೆಬೂಕದ್ನೆಚ್ಚರನ ಸೈನ್ಯವು ಕೆಸರಿನ ಇಳಿಜಾರುಗಳನ್ನೂ ತಡೆಗಟ್ಟುಗಳನ್ನೂ ಕಟ್ಟಿ ಪಟ್ಟಣವನ್ನು ವಶಪಡಿಸಿಕೊಳ್ಳುವುದು. ಎಷ್ಟೋ ಮಂದಿ ಸಾಯುವರು.


ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಜೆರುಸಲೇಮಿನಲ್ಲಿನ ಮನೆಗಳ ಬಗ್ಗೆಯೂ ಮತ್ತು ಯೆಹೂದದ ರಾಜರ ಅರಮನೆಗಳ ಬಗ್ಗೆಯೂ ಯೆಹೋವನು ಹೀಗೆ ಹೇಳುತ್ತಾನೆ. ವೈರಿಗಳು ಆ ಮನೆಗಳನ್ನು ಕೆಡವಿಬಿಡುತ್ತಾರೆ. ವೈರಿಗಳು ನಗರದ ಕೋಟೆಗೋಡೆಗಳ ತುದಿಯವರೆಗೂ ಇಳಿಜಾರಾದ ಗೋಡೆಗಳನ್ನು ಕಟ್ಟುತ್ತಾರೆ. ವೈರಿಗಳು ಖಡ್ಗ ಹಿಡಿದು ಈ ನಗರದ ಜನರೊಂದಿಗೆ ಕಾದಾಡುವರು.


ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: “ಜೆರುಸಲೇಮಿನ ಸುತ್ತಮುತ್ತಲಿನ ಮರಗಳನ್ನು ಕಡಿದುಹಾಕಿರಿ; ಜೆರುಸಲೇಮಿನ ಎದುರಿಗೆ ಒಂದು ದಿಬ್ಬ ನಿರ್ಮಿಸಿರಿ. ನಗರವನ್ನು ದಂಡಿಸಬೇಕು. ನಗರದ ಒಳಗಡೆ ದಬ್ಬಾಳಿಕೆಯ ಹೊರತು ಮತ್ತೇನಿಲ್ಲ.


ಆದ್ದರಿಂದ ಯೆಹೋವನು ಅಶ್ಶೂರದ ಅರಸನ ಬಗ್ಗೆ ಹೇಳುವನು: “ಅವನು ಈ ಪಟ್ಟಣದೊಳಗೆ ಬರುವದಿಲ್ಲ. ಅವನು ಒಂದು ಬಾಣವನ್ನೂ ಈ ಪಟ್ಟಣದ ಮೇಲೆ ಹಾರಿಸುವದಿಲ್ಲ. ಅವನು ತನ್ನ ಗುರಾಣಿಗಳನ್ನು ಈ ಪಟ್ಟಣಕ್ಕೆ ತರುವದಿಲ್ಲ. ಈ ಪಟ್ಟಣದ ಗೋಡೆಗಳ ಮೇಲೆ ಆಕ್ರಮಣಮಾಡಲು ಅವನು ದಿಬ್ಬ ಹಾಕುವದಿಲ್ಲ.


ಕೆಲವು ಜನರಿದ್ದ ಒಂದು ಚಿಕ್ಕ ನಗರವಿತ್ತು. ಒಬ್ಬ ದೊಡ್ಡ ರಾಜನು ಆ ನಗರದ ಮೇಲೆ ದಂಡೆತ್ತಿ ಬಂದು ಮುತ್ತಿಗೆ ಹಾಕಿದನು.


ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೀಯನು ತಯಾರಿಸಿದನು. ಇವುಗಳನ್ನು ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೀಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದುಕೊಂಡು ಬಲಿಷ್ಠನಾದನು.


ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.


“ನೀವು ಒಂದು ಪಟ್ಟಣವನ್ನು ಬಹುಕಾಲದಿಂದ ಮುತ್ತಿಗೆ ಹಾಕಿದರೆ ಸುತ್ತಮುತ್ತಲಿರುವ ಮರಗಳನ್ನು ಕಡಿದುಹಾಕಬಾರದು. ಅವುಗಳ ಫಲಗಳನ್ನು ತಿನ್ನಬಹುದು; ಆದರೆ ಕಡಿಯಬಾರದು. ಅವು ನಿಮ್ಮ ವೈರಿಗಳಲ್ಲವಲ್ಲಾ? ಅವು ನಿಮ್ಮೊಂದಿಗೆ ಯುದ್ಧ ಮಾಡುವುದಿಲ್ಲವಲ್ಲಾ?


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆ ಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ,


ಪ್ರತಿಯೊಂದು ಬಲಾಢ್ಯವಾದ ನಗರವನ್ನು ಮತ್ತು ಉತ್ತಮ ನಗರವನ್ನು ನೀವು ಮುತ್ತಿಗೆ ಹಾಕುವಿರಿ. ಪ್ರತಿಯೊಂದು ಒಳ್ಳೆಯ ಮರವನ್ನೂ ನೀವು ಕಡಿದು ಉರುಳಿಸುತ್ತೀರಿ. ಎಲ್ಲಾ ನೀರಿನ ಬುಗ್ಗೆಗಳನ್ನೂ ನೀವು ನಿಲ್ಲಿಸುವಿರಿ. ನೀವು ಕಲ್ಲುಗಳನ್ನೆಸೆದು ಪ್ರತಿಯೊಂದು ಒಳ್ಳೆಯ ತೋಟವನ್ನು ನಾಶಗೊಳಿಸುತ್ತೀರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು