Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:1 - ಪರಿಶುದ್ದ ಬೈಬಲ್‌

1 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆ ಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆಹೋದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬದು ತಿಳಿಯದೆಹೋದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:1
10 ತಿಳಿವುಗಳ ಹೋಲಿಕೆ  

ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.


ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.


ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ.


ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.


ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.


ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ.


ಆಗ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಅಂಥ ನಿರಪರಾಧಿಗಳು ಕೊಲ್ಲಲ್ಪಡುವುದಿಲ್ಲ; ನೀವು ಯಾವ ಮರಣದ ವಿಷಯದಲ್ಲಿಯೂ ದೋಷಿಗಳಾಗಿರುವುದಿಲ್ಲ.


ಹಣ್ಣುಗಳನ್ನು ಕೊಡದ ಮರಗಳನ್ನು ಕಡಿಯಬಹುದು. ಆ ಮರಗಳಿಂದ ಆಯುಧಗಳನ್ನು ತಯಾರಿಸಿ ಆ ಪಟ್ಟಣದ ಜನರೊಂದಿಗೆ ಯುದ್ಧ ಮಾಡಬಹುದು. ಆ ಪಟ್ಟಣವು ನಿಮ್ಮ ಕೈವಶವಾಗುವ ತನಕ ನೀವು ಅದನ್ನು ಉಪಯೋಗಿಸಬಹುದು.


ಆಗ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ಬಂದು ಪಟ್ಟಣಕ್ಕೂ ಆ ಶವದ ಸ್ಥಳಕ್ಕೂ ಎಷ್ಟು ದೂರವಿದೆ ಎಂದು ಅಳೆಯಬೇಕು.


“ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು