Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:11 - ಪರಿಶುದ್ದ ಬೈಬಲ್‌

11 ಸೆರೆಹಿಡಿಯಲ್ಪಟ್ಟವರಲ್ಲಿ ಸುಂದರಿಯಾದ ಸ್ತ್ರೀಯನ್ನು ನೋಡಿ ಆಕೆಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳ ಬಯಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರ ಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಹಿಡಿದ ಸೆರೆಯವರಲ್ಲಿ ಒಬ್ಬ ಸುಂದರ ಸ್ತ್ರೀಯನ್ನು ನಿಮ್ಮಲ್ಲಿ ಯಾರಾದರು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ, ಅವಳನ್ನು ಮನೆಗೆ ಕರೆದುಕೊಂಡು ಬರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೆರೆ ಹಿಡಿದವರಲ್ಲಿ ಒಬ್ಬ ಸುಂದರ ಸ್ತ್ರೀಯನ್ನು ನಿಮ್ಮಲ್ಲಿ ಯಾರಾದರೂ ಕಂಡು ಇಷ್ಟಪಟ್ಟರೆ, ಅವಳನ್ನು ಮದುವೆ ಮಾಡಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:11
12 ತಿಳಿವುಗಳ ಹೋಲಿಕೆ  

ಲಾವಣ್ಯ ನಿನ್ನನ್ನು ಮೋಸಗೊಳಿಸಬಲ್ಲದು; ಸೌಂದರ್ಯ ತಾತ್ಕಾಲಿಕವಾದದ್ದು. ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳ ಹೆಂಗಸೇ, ಹೊಗಳಿಕೆಗೆ ಪಾತ್ರಳು.


ಒಳ್ಳೆಯ ಹೆಂಡತಿಯನ್ನು ಪಡೆದುಕೊಳ್ಳುವುದು ತುಂಬಾ ಕಷ್ಟ. ಆಭರಣಕ್ಕಿಂತಲೂ ಹೆಚ್ಚು ಬೆಲೆಬಾಳುವಳು.


ಆಕೆಯ ಸೌಂದರ್ಯವನ್ನು ಕಂಡು ಹೃದಯದಲ್ಲಿ ಆಸೆಪಡಬೇಡ. ಆಕೆಯ ಕಣ್ಣುಗಳು ನಿನ್ನನ್ನು ವಶಮಾಡಿಕೊಳ್ಳಲು ಬಿಡಬೇಡ.


ಪುರುಷಸಂಗಮ ಮಾಡದಿರುವ ಕನ್ಯೆಯರನ್ನು ನಿಮಗಾಗಿ ಉಳಿಸಿರಿ.


ಆದರೆ ಹಮೋರನು ದೀನಳ ಅಣ್ಣಂದಿರೊಡನೆ ಮಾತಾಡಿದನು. ಅವನು ಅವರಿಗೆ, “ನನ್ನ ಮಗನಾದ ಶೆಕೆಮನು ದೀನಳನ್ನು ತುಂಬ ಇಷ್ಟಪಡುತ್ತಾನೆ. ಅವನು ಆಕೆಯನ್ನು ಮದುವೆ ಮಾಡಿಕೊಳ್ಳಲು ದಯವಿಟ್ಟು ಅವಕಾಶಕೊಡಿ.


ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.


“ನೀವು ನಿಮ್ಮ ಶತ್ರುಗಳೊಂದಿಗೆ ಯುದ್ಧಮಾಡಿ ದೇವರ ಸಹಾಯದಿಂದ ಅವರನ್ನು ಸೋಲಿಸುವಿರಿ. ನೀವು ನಿಮ್ಮ ಶತ್ರುಗಳನ್ನು ಸೆರೆಹಿಡಿದು ಕೊಂಡೊಯ್ಯುವಿರಿ.


ಆಕೆಯನ್ನು ನಿನ್ನ ಮನೆಯೊಳಗೆ ಕರೆದುಕೊಂಡು ಬರಬೇಕು. ಆಕೆಯು ತಲೆಯನ್ನು ಬೋಳಿಸಿಕೊಂಡು ಉಗುರನ್ನು ಕತ್ತರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು