Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:14 - ಪರಿಶುದ್ದ ಬೈಬಲ್‌

14 ಆಕೆಯನ್ನು ನೀನು ಮೆಚ್ಚದಿದ್ದರೆ ವಿವಾಹವಿಚ್ಛೇದನೆ ಮಾಡಿ ಆಕೆಯನ್ನು ಸ್ವತಂತ್ರಳಾಗುವಂತೆ ಬಿಟ್ಟುಬಿಡಬಹುದು. ಆದರೆ ನೀನು ಆಕೆಯನ್ನು ಮಾರಬಾರದು. ಆಕೆಯನ್ನು ಗುಲಾಮಳಂತೆ ನೋಡಬಾರದು. ಯಾಕೆಂದರೆ ನೀನು ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳು ಆಶಿಸುವಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಕೂಡಿದ್ದರಿಂದ ಹಣಕ್ಕೆ ಮಾರಲೂಬಾರದು, ಊಳಿಗದವಳಂತೆ ನಡೆಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಕೂಡಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡಿಸಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ, ಅವನು ಅವಳನ್ನು ಅವಳು ಬಯಸಿದ ಸ್ಥಳಕ್ಕೆ ಕಳುಹಿಸಿಬಿಡಬೇಕು. ಅವಳನ್ನು ಅವಮಾನಪಡಿಸಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡೆಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:14
7 ತಿಳಿವುಗಳ ಹೋಲಿಕೆ  

ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲೆ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು.


ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು.


ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.


ಹಿರಿಯರು ಅವನಿಂದ ನಲವತ್ತು ತೊಲೆ ಬೆಳ್ಳಿಯನ್ನು ಹುಡುಗಿಯ ತಂದೆಗೆ ಕೊಡಿಸಬೇಕು. ಯಾಕೆಂದರೆ ಒಬ್ಬ ಇಸ್ರೇಲಿನ ಹುಡುಗಿಗೆ ಅವನು ಅವಮಾನಪಡಿಸಿದ ಕಾರಣ ಆ ಹುಡುಗಿಯು ಅವನ ಹೆಂಡತಿಯಾಗಿಯೇ ಬಾಳಬೇಕು. ಅವನು ಆಕೆಯನ್ನು ಎಂದಿಗೂ ವಿವಾಹವಿಚ್ಛೇದನೆ ಮಾಡಬಾರದು.


ಇಲ್ಲಿ ನೋಡಿರಿ, ನನ್ನ ಮಗಳಿದ್ದಾಳೆ. ಅವಳು ಯಾರೊಂದಿಗೂ ಈವರೆಗೆ ಸಂಭೋಗ ಮಾಡಿಲ್ಲ. ನಾನು ಅವಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ಕರೆದುಕೊಂಡು ಬರುತ್ತೇನೆ. ನಿಮ್ಮ ಮನಸ್ಸಿಗೆ ಬಂದಂತೆ ಅವರನ್ನು ಬಳಸಿಕೊಳ್ಳಿ. ನೀವು ಅವರನ್ನು ಹಿಂಸಿಸಿದರೂ ಆ ಮನುಷ್ಯನ ವಿರೋಧವಾಗಿ ಅಂಥ ಭಯಂಕರ ಪಾಪವನ್ನು ಮಾಡಬೇಡಿ” ಎಂದು ಅವರನ್ನು ಬೇಡಿಕೊಂಡನು.


“ಒಬ್ಬ ಪುರುಷನಿಗೆ ಇಬ್ಬರು ಹೆಂಡತಿಯರಿದ್ದರೆ ಅವರಲ್ಲಿ ಒಬ್ಬಾಕೆಯನ್ನು ಅವನು ಹೆಚ್ಚಾಗಿ ಪ್ರೀತಿಸಿದರೂ ಪ್ರೀತಿಸಬಹುದು. ಆ ಇಬ್ಬರು ಅವನಿಗೆ ಮಕ್ಕಳನ್ನು ಹೆರುವರು. ಹಿರಿಮಗನು ತಾನು ಪ್ರೀತಿಸದ ಹೆಂಡತಿಯಲ್ಲಿ ಹುಟ್ಟಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು