Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:15 - ಪರಿಶುದ್ದ ಬೈಬಲ್‌

15 “ಒಬ್ಬ ಪುರುಷನಿಗೆ ಇಬ್ಬರು ಹೆಂಡತಿಯರಿದ್ದರೆ ಅವರಲ್ಲಿ ಒಬ್ಬಾಕೆಯನ್ನು ಅವನು ಹೆಚ್ಚಾಗಿ ಪ್ರೀತಿಸಿದರೂ ಪ್ರೀತಿಸಬಹುದು. ಆ ಇಬ್ಬರು ಅವನಿಗೆ ಮಕ್ಕಳನ್ನು ಹೆರುವರು. ಹಿರಿಮಗನು ತಾನು ಪ್ರೀತಿಸದ ಹೆಂಡತಿಯಲ್ಲಿ ಹುಟ್ಟಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಒಬ್ಬನಿಗೆ ಇಬ್ಬರು ಹೆಂಡತಿಯರಿದ್ದು ಅವರಲ್ಲಿ ಒಬ್ಬಳನ್ನು ಪ್ರೀತಿಸಿ ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭದಲ್ಲಿ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾವನಾದರೂ ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭದಲ್ಲಿ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದವರಾಗಿರಲಾಗಿ ಚೊಚ್ಚಲುಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ ಪಕ್ಷಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದು, ಒಬ್ಬಳನ್ನು ಪ್ರೀತಿಸುತ್ತಲೂ, ಮತ್ತೊಬ್ಬಳನ್ನು ದ್ವೇಷಿಸುತ್ತಲೂ ಇದ್ದರೆ, ಅವರಿಬ್ಬರೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ, ಚೊಚ್ಚಲು ಮಗನು ತಿರಸ್ಕಾರ ಹೊಂದುತ್ತಿರುವ ಹೆಂಡತಿಯಲ್ಲಿಯೇ ಹುಟ್ಟಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:15
8 ತಿಳಿವುಗಳ ಹೋಲಿಕೆ  

ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದು ನನಗೆ ಈ ಮಗುವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಸಿಮೆಯೋನ್ ಎಂದು ಹೆಸರಿಟ್ಟಳು.


ಆದ್ದರಿಂದ ಯಾಕೋಬನು ಅವನೊಂದಿಗೆ ಇದ್ದುಕೊಂಡು ಏಳು ವರ್ಷಗಳವರೆಗೆ ಲಾಬಾನನ ಸೇವೆ ಮಾಡಿದನು. ಆದರೆ ಅವನು ರಾಹೇಲಳನ್ನು ತುಂಬಾ ಪ್ರೀತಿಸುತ್ತಿದ್ದುದರಿಂದ ಆ ಸಮಯವು ಅವನಿಗೆ ತುಂಬಾ ಕಡಿಮೆಯಂತೆ ಕಾಣಿಸಿತು.


ಯಾಕೋಬನು ರಾಹೇಲಳನ್ನು ಪ್ರೀತಿಸಿದನು. ಯಾಕೋಬನು ಲಾಬಾನನಿಗೆ, “ನಿನ್ನ ಚಿಕ್ಕಮಗಳಾದ ರಾಹೇಲಳನ್ನು ನನಗೆ ಮದುವೆ ಮಾಡಿಕೊಡುವುದಾದರೆ ನಾನು ನಿನಗೆ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಿದನು.


ಆ ಪುರುಷನು ತನ್ನ ಆಸ್ತಿಯನ್ನು ತನ್ನ ಮಕ್ಕಳಿಗೆ ಪಾಲುಮಾಡಿ ಕೊಡುವಾಗ ಚೊಚ್ಚಲಮಗನಿಗೆ ಸಿಗಬೇಕಾದ ಆಸ್ತಿಯನ್ನು ತಾನು ಪ್ರೀತಿಸುವ ಹೆಂಡತಿಯ ಮಗನಿಗೆ ಕೊಡಬಾರದು.


ಎಲ್ಕಾನನಿಗೆ ಇಬ್ಬರು ಹೆಂಡತಿಯರು. ಹನ್ನಳು ಎಂಬುದು ಒಬ್ಬಳ ಹೆಸರಾದರೆ, ಇನ್ನೊಬ್ಬಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.


ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರೊಳಗಿಂದ ನಾಯಕನನ್ನಾಗಿ ಆರಿಸಿದನು. ರೆಹಬ್ಬಾಮನು ಅವನನ್ನು ಅರಸನನ್ನಾಗಿ ಮಾಡಬೇಕೆಂಬುದೇ ಅವನ ಉದ್ದೇಶವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು