ಧರ್ಮೋಪದೇಶಕಾಂಡ 21:16 - ಪರಿಶುದ್ದ ಬೈಬಲ್16 ಆ ಪುರುಷನು ತನ್ನ ಆಸ್ತಿಯನ್ನು ತನ್ನ ಮಕ್ಕಳಿಗೆ ಪಾಲುಮಾಡಿ ಕೊಡುವಾಗ ಚೊಚ್ಚಲಮಗನಿಗೆ ಸಿಗಬೇಕಾದ ಆಸ್ತಿಯನ್ನು ತಾನು ಪ್ರೀತಿಸುವ ಹೆಂಡತಿಯ ಮಗನಿಗೆ ಕೊಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತಂದೆ ತನ್ನ ಆಸ್ತಿಯನ್ನು ಮಕ್ಕಳಿಗೆ ಸೊತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು, ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತಂದೆಯು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವನು ತನ್ನ ಪುತ್ರರಿಗೆ ತನ್ನ ಆಸ್ತಿಯನ್ನು ಹಂಚಿ ಕೊಡುವಾಗ, ತಾನು ಪ್ರೀತಿಮಾಡದ ಹೆಂಡತಿಯ ಚೊಚ್ಚಲ ಮಗನಿಗೆ ಬದಲಾಗಿ ಅವನು ಪ್ರೀತಿಸುವವಳ ಮಗನನ್ನು ಹಿರಿಯನೆಂದು ಮಾಡಕೂಡದು. ಅಧ್ಯಾಯವನ್ನು ನೋಡಿ |