Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:19 - ಪರಿಶುದ್ದ ಬೈಬಲ್‌

19 ಆಗ ಅವನ ತಂದೆತಾಯಿಗಳು ಆ ಮಗನನ್ನು ಪಟ್ಟಣದ ಹಿರಿಯರು ಸೇರಿಬರುವ ಸ್ಥಳಕ್ಕೆ ಕರೆದುಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ತಂದೆತಾಯಿಗಳು ಅವನನ್ನು ಹಿಡಿದು ಊರಬಾಗಿಲಿಗೆ ಹಿರಿಯರ ಮುಂದೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು ಊರುಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನ ತಂದೆತಾಯಿಗಳು ಅವನನ್ನು ಹಿಡಿದು, ಪಟ್ಟಣದ ಹಿರಿಯರ ಬಳಿಗೂ ಅವನ ಊರಿನ ಬಾಗಿಲಿನ ಬಳಿಗೂ ತಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:19
7 ತಿಳಿವುಗಳ ಹೋಲಿಕೆ  

ಯಾವನಾದರೂ ಪ್ರವಾದಿಸುವದನ್ನು ಮಂದುವರಿಸಿದರೆ ಅವನು ಶಿಕ್ಷೆಗೆ ಗುರಿಯಾಗುವನು. ‘ನೀನು ಯೆಹೋವನ ಹೆಸರಿನಲ್ಲಿ ಸುಳ್ಳನ್ನು ಹೇಳಿರುವೆ. ಆದ್ದರಿಂದ ನೀನು ಸಾಯಲೇಬೇಕು’ ಎಂದು ಅವನ ಸ್ವಂತ ತಂದೆತಾಯಿಗಳು ಅವನಿಗೆ ಹೇಳುವರು. ಅವನ ಸ್ವಂತ ತಂದೆ ತಾಯಿಗಳು ಅವನು ಸುಳ್ಳು ಪ್ರವಾದನೆ ಹೇಳಿದ್ದಕ್ಕೆ ಅವನನ್ನು ಖಡ್ಗದಿಂದ ಕೊಲ್ಲಿಸುವರು.


ಆದರೆ ಮೈದುನನು, ಸತ್ತುಹೋದ ತನ್ನ ಅಣ್ಣನ ಸ್ಥಾನವನ್ನು ತೆಗೆದುಕೊಳ್ಳಲು ಇಷ್ಟಪಡದೆಹೋದಲ್ಲಿ, ಆಕೆಯು ಊರಿನ ಹಿರಿಯರ ಬಳಿಗೆ ಹೋಗಿ ಹಿರಿಯರಿಗೆ ಹೀಗೆ ಹೇಳಬೇಕು: ‘ನನ್ನ ಮೈದುನನು ತನ್ನ ಅಣ್ಣನ ಹೆಸರನ್ನು ಇಸ್ರೇಲಿನಲ್ಲಿ ಉಳಿಸಲು ಇಷ್ಟಪಡುವುದಿಲ್ಲ.’


ಆಗ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ಬಂದು ಪಟ್ಟಣಕ್ಕೂ ಆ ಶವದ ಸ್ಥಳಕ್ಕೂ ಎಷ್ಟು ದೂರವಿದೆ ಎಂದು ಅಳೆಯಬೇಕು.


“ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.


“ಒಬ್ಬ ಮನುಷ್ಯನಿಗೆ ಹಠಮಾರಿಯಾದ ಅವಿಧೇಯ ಮಗನಿರಬಹುದು. ಈ ಮಗನು ತಂದೆಯ ಮಾತನ್ನಾಗಲಿ ತಾಯಿಯ ಮಾತನ್ನಾಗಲಿ ಕೇಳದವನಾಗಿದ್ದರೆ ಅವನಿಗೆ ಅವರು ಶಿಕ್ಷೆ ಕೊಟ್ಟರೂ ಅವನು ಅವರಿಗೆ ವಿಧೇಯನಾಗದಿದ್ದರೆ, ಅವರ ಮಾತುಗಳನ್ನು ಕೇಳದಿದ್ದರೆ,


ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: ‘ನಮ್ಮ ಮಗನು ಹಠಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳೊಂದನ್ನೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.’


ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು