Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:20 - ಪರಿಶುದ್ದ ಬೈಬಲ್‌

20 ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: ‘ನಮ್ಮ ಮಗನು ಹಠಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳೊಂದನ್ನೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಲ್ಲಿ ಅವರಿಗೆ, ‘ಈ ನಮ್ಮ ಮಗ ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ,ತುಂಟ’ ಎಂದು ಸಾಕ್ಷಿ ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವದೇ ಇಲ್ಲ. ಆಜ್ಞೆಗೆ ಒಳಗಾಗುವದಿಲ್ಲ; ಇವನು ಮೊಂಡ ಕುಡಿಕ ತುಂಟ ಎಂದು ಸಾಕ್ಷಿ ಹೇಳಬೇಕು. ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪಟ್ಟಣದ ಹಿರಿಯರಿಗೆ, “ಈ ನಮ್ಮ ಮಗನು ಮೊಂಡನೂ, ತಿರುಗಿ ಬೀಳುವವನೂ, ನಮ್ಮ ಮಾತು ಕೇಳದವನೂ, ಹೊಟ್ಟೆ ಬಾಕನೂ, ಕುಡುಕನೂ ಆಗಿದ್ದಾನೆ,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:20
8 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವು ಪರಿಹಾಸ್ಯಕ್ಕೂ ಮದ್ಯವು ಕೂಗಾಟಕ್ಕೂ ನಡೆಸುತ್ತವೆ. ಅಮಲೇರಿಸಿಕೊಳ್ಳುವುದು ಮೂರ್ಖತನ.


ನಿನ್ನ ಮಗನನ್ನು ತಿದ್ದಿ ಸರಿಪಡಿಸು; ಆಗ ನೀನು ಅವನ ಬಗ್ಗೆ ಹೆಮ್ಮೆಯಿಂದಿರುವೆ. ಅವನು ನಿನ್ನನ್ನು ತೃಪ್ತಿಪಡಿಸುವನು.


ತಂದೆಗೆ ಹೊಡೆಯುವವನೂ ತಾಯಿಯನ್ನು ಓಡಿಸುವವನೂ ತನಗೇ ನಾಚಿಕೆಯನ್ನು ಮತ್ತು ಅವಮಾನವನ್ನು ತಂದುಕೊಳ್ಳುವನು.


ಆಗ ಅವನ ತಂದೆತಾಯಿಗಳು ಆ ಮಗನನ್ನು ಪಟ್ಟಣದ ಹಿರಿಯರು ಸೇರಿಬರುವ ಸ್ಥಳಕ್ಕೆ ಕರೆದುಕೊಂಡು ಹೋಗಿ


ಆಗ ಆ ಪಟ್ಟಣದ ಜನರು ಸೇರಿ ಆ ಮಗನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನಿಮ್ಮಲ್ಲಿರುವ ದುಷ್ಟತನವನ್ನು ತೆಗೆದುಹಾಕಬೇಕು. ಎಲ್ಲಾ ಇಸ್ರೇಲರು ಇದನ್ನು ಕೇಳಿ ಭಯಗ್ರಸ್ತರಾಗುವರು.


ನಂತರ ಯೋವಾಬನ ಜನರು ಅಬ್ಷಾಲೋಮನ ದೇಹವನ್ನು ತೆಗೆದುಕೊಂಡು ಹೋಗಿ, ಕಾಡಿನ ಒಂದು ದೊಡ್ಡ ಕುಣಿಯಲ್ಲಿ ಎಸೆದರು. ಅವರು ಆ ದೊಡ್ಡ ಕುಣಿಯನ್ನು ಕಲ್ಲುಗಳಿಂದ ತುಂಬಿಸಿದರು. ಅಬ್ಷಾಲೋಮನನ್ನು ಹಿಂಬಾಲಿಸಿಕೊಂಡು ಬಂದಿದ್ದ ಇಸ್ರೇಲರೆಲ್ಲ ಮನೆಗೆ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು