ಧರ್ಮೋಪದೇಶಕಾಂಡ 21:21 - ಪರಿಶುದ್ದ ಬೈಬಲ್21 ಆಗ ಆ ಪಟ್ಟಣದ ಜನರು ಸೇರಿ ಆ ಮಗನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನಿಮ್ಮಲ್ಲಿರುವ ದುಷ್ಟತನವನ್ನು ತೆಗೆದುಹಾಕಬೇಕು. ಎಲ್ಲಾ ಇಸ್ರೇಲರು ಇದನ್ನು ಕೇಳಿ ಭಯಗ್ರಸ್ತರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅಗ ಊರಿನವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದು ಹಾಕಿಬಿಡಬೇಕು. ಇಸ್ರಯೇಲರೆಲ್ಲರು ಕೇಳಿ ಭಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು. ಅಧ್ಯಾಯವನ್ನು ನೋಡಿ |
ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.