Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:23 - ಪರಿಶುದ್ದ ಬೈಬಲ್‌

23 ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:23
18 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ಆ ದಿನವು ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷವಾದ ಸಬ್ಬತ್‌ದಿನವಾಗಿತ್ತು. ಸಬ್ಬತ್‌ದಿನದಂದು ದೇಹಗಳು ಶಿಲುಬೆಯ ಮೇಲಿರುವುದು ಯೆಹೂದ್ಯರಿಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಕಾಲುಗಳನ್ನು ಮುರಿದು ಬೇಗನೆ ಸಾಯಿಸಲು ಆಜ್ಞಾಪಿಸಬೇಕೆಂಬುದಾಗಿ ಅವರು ಪಿಲಾತನನ್ನು ಕೇಳಿಕೊಂಡರು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು.


ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.


ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.


ಯೆಹೋಶುವನು “ಆಯಿ”ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ.


ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು. ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು.


ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ.


ಅಯ್ಯಾಹನ ಮಗಳಾದ ರಿಚ್ಪಳು ಶೋಕವಸ್ತ್ರವನ್ನು ಕಲ್ಲಿನ ಮೇಲೆ ಹಾಸಿದಳು. ಸುಗ್ಗಿಯ ಆರಂಭದಿಂದ, ಆ ದೇಹಗಳ ಮೇಲೆ ಮಳೆಯು ಬೀಳುವ ತನಕ, ಆಕೆ ಆ ವಸ್ತ್ರದ ಮೇಲೆ ಕುಳಿತುಕೊಂಡಳು. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಹಗಲು ಹೊತ್ತಿನಲ್ಲಿಯೂ, ಕಾಡಿನ ಪ್ರಾಣಿಗಳು ರಾತ್ರಿಯ ಹೊತ್ತಿನಲ್ಲಿಯೂ ತನ್ನ ಮಕ್ಕಳ ದೇಹಗಳನ್ನು ಮುಟ್ಟಲು ರಿಚ್ಪಳು ಅವಕಾಶಕೊಡಲಿಲ್ಲ.


ಇವರನ್ನೆಲ್ಲಾ ಸಮಾಧಿ ಮಾಡಲು ಇಸ್ರೇಲರಿಗೆ ಏಳು ತಿಂಗಳು ಬೇಕಾಗುವದು. ತಮ್ಮ ರಾಜ್ಯವನ್ನು ಶುದ್ಧಪಡಿಸಲು ಅವರು ಹಾಗೆ ಮಾಡಲೇಬೇಕು.


“ನಿಮ್ಮ ದೆಸೆಯಿಂದ ಯೆಹೋವನು ನನ್ನ ಮೇಲೆ ಸಿಟ್ಟುಗೊಂಡನು. ಆ ಕಾರಣದಿಂದ ಕಾನಾನ್ ದೇಶವನ್ನು ನಾನು ಪ್ರವೇಶಿಸಬಾರದು ಎಂದು ನನಗೆ ಹೇಳಿರುತ್ತಾನೆ. ಜೋರ್ಡನ್ ನದಿಯಾಚೆ ನಿಮಗೆ ಕೊಡುವ ಆ ಉತ್ತಮ ದೇಶವನ್ನು ನಾನು ನೋಡುವುದಿಲ್ಲವೆಂದು ಪ್ರಮಾಣ ಮಾಡಿದ್ದಾನೆ.


ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.


ಸಂದೇಶಕನೊಬ್ಬನು ಯೇಹುವಿನ ಬಳಿಗೆ ಬಂದು ಅವನಿಗೆ, “ಅವರು ರಾಜನ ಮಕ್ಕಳ ತಲೆಗಳನ್ನು ತಂದಿದ್ದಾರೆ!” ಎಂದು ಹೇಳಿದನು. ಆಗ ಯೇಹು, “ನಗರದ ಬಾಗಿಲಿನ ಬಳಿ ನಾಳೆ ಮುಂಜಾನೆಯ ತನಕ ಆ ತಲೆಗಳನ್ನು ಎರಡು ರಾಶಿಗಳನ್ನಾಗಿ ಹಾಕಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು