ಧರ್ಮೋಪದೇಶಕಾಂಡ 21:5 - ಪರಿಶುದ್ದ ಬೈಬಲ್5 ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರವಿರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಆದುಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |
ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.
ನಿಮ್ಮ ಬಳಿಗೆ ಕೊಲೆಯ ಪ್ರಕರಣಗಳ ಬಗ್ಗೆ, ಕಟ್ಟಳೆಯ ಬಗ್ಗೆ, ಆಜ್ಞೆಯ ಬಗ್ಗೆ, ನಿಯಮದ ಬಗ್ಗೆ ಮತ್ತು ಬೇರೆ ಯಾವುದಾದರೂ ಕಟ್ಟಳೆಯ ಬಗ್ಗೆ ಬಗೆಹರಿಸಲು ಬರಬಹುದು. ಅವೆಲ್ಲಾ ನಿಮ್ಮ ಸಹೋದರರಿಂದಲೇ ಬರುವವು. ದೇವರಿಗೆ ವಿರುದ್ಧವಾಗಿ ಪಾಪಮಾಡಬಾರದೆಂಬುದಾಗಿ ಅವರಿಗೆಲ್ಲಾ ಎಚ್ಚರಿಸಬೇಕು. ನೀವು ನಂಬಿಗಸ್ತಿಕೆಯಿಂದ ಸೇವೆಮಾಡದಿದ್ದಲ್ಲಿ ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ದೇವರ ಕೋಪ ಉರಿಯುವಂತೆ ಮಾಡಿಕೊಳ್ಳುವಿರಿ. ನೀವು ತಪ್ಪಿತಸ್ಥರಾಗದೆ ನಂಬಿಗಸ್ತಿಕೆಯಿಂದ ಸೇವೆಮಾಡಿರಿ.