ಧರ್ಮೋಪದೇಶಕಾಂಡ 22:1 - ಪರಿಶುದ್ದ ಬೈಬಲ್1 “ನಿಮ್ಮ ನೆರೆಯವನ ಕಟ್ಟಿರುವ ದನವಾಗಲಿ ಕುರಿಯಾಗಲಿ ಹಗ್ಗ ಬಿಚ್ಚಿಕೊಂಡಿರುವುದನ್ನು ನೀವು ಕಂಡರೆ ಅದನ್ನು ನಿರ್ಲಕ್ಷಿಸದೆ, ಕೂಡಲೇ ಅದನ್ನು ಅದರ ಧಣಿಯ ಬಳಿಗೆ ಅಟ್ಟಿಕೊಂಡು ಹೋಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಸ್ವದೇಶದವನ ಎತ್ತಾಗಲಿ, ಕುರಿ ಆಗಲಿ ದಾರಿತಪ್ಪಿಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು; ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸ್ವದೇಶದವನ ಎತ್ತಾಗಲಿ ಕುರಿಯಾಗಲಿ ದಾರಿತಪ್ಪಿ ಹೋಗಿರುವದನ್ನು ನೀವು ಕಂಡರೆ ಕಾಣದವರಂತೆ ಅದನ್ನು ಬಿಟ್ಟು ಹೋಗಬಾರದು; ಅವನ ಬಳಿಗೆ ಅಟ್ಟಿಕೊಂಡುಹೋಗಿ ಕೊಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸ್ವದೇಶದವನ ಎತ್ತಾಗಲಿ, ಕುರಿಯಾಗಲಿ ದಾರಿತಪ್ಪಿ ಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು. ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು. ಅಧ್ಯಾಯವನ್ನು ನೋಡಿ |
ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”
ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.