Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:21 - ಪರಿಶುದ್ದ ಬೈಬಲ್‌

21 ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಾಯೇಲ್ಯರೊಳಗೆ ದುರಾಚಾರವನ್ನು ನಡಿಸಿದ್ದರಿಂದ ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ತರಿಸಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:21
24 ತಿಳಿವುಗಳ ಹೋಲಿಕೆ  

ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.


ಹೊಲದಲ್ಲಿದ್ದ ಯಾಕೋಬನ ಗಂಡುಮಕ್ಕಳು ನಡೆದ ಸಂಗತಿಯನ್ನು ಕೇಳಿ ತುಂಬ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಮಾನಭಂಗ ಮಾಡಿ ಇಸ್ರೇಲರಿಗೆ ಅವಮಾನ ಮಾಡಿದ್ದರಿಂದ ಅವರು ಆವೇಶಗೊಂಡರು. ಶೆಕೆಮನು ತುಂಬ ಕೆಟ್ಟದ್ದನ್ನು ಮಾಡಿದ್ದರಿಂದ ಅಣ್ಣಂದಿರು ಹೊಲದಿಂದ ಹಿಂತಿರುಗಿದರು.


ಬಳಿಕ ನಾನು ನನ್ನ ಉಪಪತ್ನಿಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಇಸ್ರೇಲರ ಪ್ರತಿಯೊಂದು ಕುಲಕ್ಕೂ ಒಂದು ತುಂಡನ್ನು ಕಳುಹಿಸಿದೆ. ಹೀಗೆ ನಾವು ಪಡೆದುಕೊಂಡ ಪ್ರದೇಶಗಳಿಗೆ ಹನ್ನೆರಡು ತುಂಡುಗಳನ್ನು ಕಳುಹಿಸಿದೆ. ಇಸ್ರೇಲಿನಲ್ಲಿ ಬೆನ್ಯಾಮೀನ್ಯರು ಇಂಥ ಭಯಾನಕ ಕೃತ್ಯವನ್ನು ಮಾಡಿದ್ದಕ್ಕಾಗಿ ನಾನು ಇದನ್ನು ಮಾಡಿದೆ.


ನಾವು ಇಸ್ರೇಲಿನ ಎಲ್ಲ ಕುಲಗಳಲ್ಲಿ ಪ್ರತಿ ನೂರು ಮಂದಿಗೆ ಹತ್ತು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಸಾವಿರ ಮಂದಿಗೆ ನೂರು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಹತ್ತು ಸಾವಿರ ಮಂದಿಗೆ ಒಂದು ಸಾವಿರ ಮಂದಿಯನ್ನು ಆರಿಸಿಕೊಳ್ಳೋಣ. ಹೀಗೆ, ನಾವು ಆರಿಸಿಕೊಂಡ ಜನರು ಸೈನ್ಯಕ್ಕೆ ಆಹಾರ ಸರಬರಾಜು ಮಾಡಲಿ. ಆಮೇಲೆ ಬೆನ್ಯಾಮೀನ್ಯರ ಪ್ರದೇಶದಲ್ಲಿರುವ ಗಿಬೆಯಕ್ಕೆ ಸೈನ್ಯ ಕಳುಹಿಸೋಣ. ಇಸ್ರೇಲರಿಗೆ ಹೀಗೆ ನಿಂದೆಗೆ ಗುರಿಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ದೊರಕಲಿ” ಎಂದು ಹೇಳಿದರು.


ಆಗ ಆ ಪಟ್ಟಣದ ಜನರು ಸೇರಿ ಆ ಮಗನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನಿಮ್ಮಲ್ಲಿರುವ ದುಷ್ಟತನವನ್ನು ತೆಗೆದುಹಾಕಬೇಕು. ಎಲ್ಲಾ ಇಸ್ರೇಲರು ಇದನ್ನು ಕೇಳಿ ಭಯಗ್ರಸ್ತರಾಗುವರು.


ಆ ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳಾಡಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಈ ರೀತಿಯಾಗಿ ಆ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು.


ಸತ್ಯವೆಂದು ಹೇಳಿದ ಸಾಕ್ಷಿಗಳು ಮೊದಲು ಅವರ ಮೇಲೆ ಕಲ್ಲೆಸೆಯಬೇಕು. ಅನಂತರ ಬೇರೆಯವರು ಕಲ್ಲೆಸೆದು ಅವರನ್ನು ಸಾಯಿಸಬೇಕು. ಈ ರೀತಿಯಾಗಿ ನಿಮ್ಮ ಮಧ್ಯೆ ಇದ್ದ ದುಷ್ಕೃತ್ಯವನ್ನು ತೆಗೆದುಹಾಕಬೇಕು.


“ಯಾಜಕನ ಮಗಳು ವೇಶ್ಯೆಯಾಗಿದ್ದರೆ, ಅವಳು ತನ್ನ ಗೌರವವನ್ನು ಹಾಳುಮಾಡಿಕೊಂಡವಳೂ ತನ್ನ ತಂದೆಗೆ ಅವಮಾನವನ್ನು ಉಂಟುಮಾಡಿದವಳೂ ಆಗಿದ್ದಾಳೆ. ಅವಳನ್ನು ಸುಟ್ಟುಹಾಕಬೇಕು.


ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.


“ಒಬ್ಬ ಮನುಷ್ಯನು ಇನ್ನೊಬ್ಬ ಮನುಷ್ಯನ ಹೆಂಡತಿಯ ಜೊತೆಗೆ ಲೈಂಗಿಕ ಸಂಬಂಧವನ್ನಿಟ್ಟಿದ್ದರೆ ಅವರಿಬ್ಬರನ್ನೂ ಸಾಯಿಸಬೇಕು. ಆ ಕೆಡುಕನ್ನು ನೀವು ಇಸ್ರೇಲಿನಿಂದ ತೆಗೆದುಹಾಕಬೇಕು.


ಆ ಪಾಪಮಾಡಿದವನಿಗೆ ಶಿಕ್ಷೆಯನ್ನು ವಿಧಿಸಬೇಕು. ಪಟ್ಟಣದ ಹೆಬ್ಬಾಗಿಲ ಹೊರಗಿರುವ ಬಯಲಿಗೆ ಆ ತಪ್ಪು ಮಾಡಿದ ಸ್ತ್ರೀಯನ್ನೂ, ಪುರುಷನನ್ನೂ ತೆಗೆದುಕೊಂಡು ಹೋಗಿ ಅಲ್ಲಿ ಅವರನ್ನು ಕಲ್ಲೆಸೆದು ಸಾಯಿಸಬೇಕು.


ಬಳಿಕ ಮೋಶೆಯು ಇಸ್ರೇಲರೊಂದಿಗೆ ಮಾತಾಡಿದನು. ಆಗ ಅವರು ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಅವನಿಗೆ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.


ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣಶಿಕ್ಷೆಯಾಗಬೇಕು.


“ಮಗಳನ್ನು ಸೂಳೆಯನ್ನಾಗಿ ಮಾಡಬಾರದು. ಇದರಿಂದ ಸೂಳೆಗಾರಿಕೆ ಹೆಚ್ಚಾಗುತ್ತದೆ. ನಿಮ್ಮ ದೇಶದಲ್ಲಿ ಸೂಳೆಗಾರಿಕೆ ಇರದಂತೆ ನೋಡಿಕೊಳ್ಳಿರಿ. ಇಂಥ ಪಾಪದಿಂದ ನಿಮ್ಮ ದೇಶವು ತುಂಬಿಹೋಗಲು ಬಿಡಬೇಡಿರಿ.


ಆ ವೃದ್ಧನು ಮನೆಯಿಂದ ಹೊರಗೆ ಬಂದು ಆ ನೀಚರ ಜೊತೆ ಮಾತನಾಡಿ, “ಬೇಡ, ನನ್ನ ಮಿತ್ರರೇ, ಅಂಥ ಪಾಪದ ಕೆಲಸವನ್ನು ಮಾಡಬೇಡಿ. ಆ ಮನುಷ್ಯ ನನ್ನ ಅತಿಥಿಯಾಗಿದ್ದಾನೆ. ಈ ಭಯಂಕರ ಪಾಪವನ್ನು ಮಾಡಬೇಡಿ.


ಆದರೆ ರಾತ್ರಿ ಸಮಯದಲ್ಲಿ ಗಿಬೆಯ ನಗರದ ಮುಖಂಡರು ಬಂದು ನಾವು ಇಳಿದುಕೊಂಡ ಮನೆಗೆ ಮುತ್ತಿಗೆ ಹಾಕಿದರು. ಅವರು ನನ್ನನ್ನು ಕೊಲ್ಲಬೇಕೆಂದಿದ್ದರು. ಅವರು ನನ್ನ ಉಪಪತ್ನಿಯ ಮೇಲೆ ಬಲಾತ್ಕಾರ ಮಾಡಿದರು; ಆಗ ಅವಳು ಸತ್ತುಹೋದಳು.


ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.


“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು. ನಿಮ್ಮ ದೇಶದಲ್ಲಿರುವ ಒಬ್ಬನು ತನ್ನ ಮಕ್ಕಳಲ್ಲಿ ಒಬ್ಬನನ್ನು ಸುಳ್ಳು ದೇವರಾದ ಮೊಲೆಕನಿಗೆ ಅರ್ಪಿಸಿದರೆ ಅವನನ್ನು ಕೊಲ್ಲಬೇಕು. ಅವನು ಸ್ವದೇಶಸ್ಥನಾದರೂ ಇಸ್ರೇಲರಲ್ಲಿ ವಾಸಿಸುವ ಪರದೇಶಸ್ಥನಾದರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು