Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:25 - ಪರಿಶುದ್ದ ಬೈಬಲ್‌

25 “ಆದರೆ ಒಬ್ಬನು ಮತ್ತೊಬ್ಬನಿಗೆ ನಿಶ್ಚಿತಾರ್ಥವಾಗಿರುವ ಕನ್ನಿಕೆಯೊಬ್ಬಳನ್ನು ಹೊಲದಲ್ಲಿ ಕಂಡು ಆಕೆಯನ್ನು ಬಲಾತ್ಕಾರವಾಗಿ ಕೂಡಿದರೆ, ಅವನನ್ನು ಮಾತ್ರ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಆದರೆ ಆ ವ್ಯಕ್ತಿ ನಿಶ್ಚಿತಳಾದ ಆ ಮಹಿಳೆಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಆ ವ್ಯಕ್ತಿಗೆ ಮಾತ್ರ ಮರಣಶಿಕ್ಷೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗವಿುಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಆ ಮನುಷ್ಯನು ನಿಶ್ಚಯಮಾಡಿದ ಹುಡುಗಿಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ, ಅವಳ ಸಂಗಡ ಮಲಗಿದರೆ, ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:25
4 ತಿಳಿವುಗಳ ಹೋಲಿಕೆ  

ಆದರೆ ತಾಮಾರಳ ಮಾತುಗಳನ್ನು ಅಮ್ನೋನನು ಕೇಳಲಿಲ್ಲ. ಅವನು ತಾಮಾರಳಿಗಿಂತ ಬಲಶಾಲಿಯಾಗಿದ್ದುದರಿಂದ ಅವಳ ಮೇಲೆ ಬಲಾತ್ಕಾರ ಮಾಡಿದನು.


ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು.


ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.


ಆ ಹುಡುಗಿಗೆ ನೀವು ಏನನ್ನೂ ಮಾಡಬಾರದು. ಆಕೆ ಶಿಕ್ಷೆಗೆ ಅರ್ಹಳಾಗುವಂಥ ಕಾರ್ಯವೇನೂ ಮಾಡಲಿಲ್ಲ. ಒಬ್ಬನು ತನ್ನ ಸ್ನೇಹಿತನ ಮೇಲೆ ಆಕ್ರಮಣ ಮಾಡಿ ಕೊಂದಂತೆಯಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು