ಧರ್ಮೋಪದೇಶಕಾಂಡ 22:8 - ಪರಿಶುದ್ದ ಬೈಬಲ್8 “ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನೀವು ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ನಿಮ್ಮ ಮನೆಯ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಿಸಬೇಕು. ಇಲ್ಲದಿದ್ದರೆ ಒಬ್ಬನು ಆ ಮಾಳಿಗೆಯಿಂದ ಬಿದ್ದು, ಅವನ ಜೀವಹತ್ಯದೋಷ ನಿಮ್ಮ ಮನೆಯ ಮೇಲೆ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀನು ಹೊಸ ಮನೆಯನ್ನು ಕಟ್ಟಿದಾಗ, ಯಾರೂ ಅದರ ಮೇಲಿನಿಂದ ಬಿದ್ದು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಬೇಕು. ಅಧ್ಯಾಯವನ್ನು ನೋಡಿ |
“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.
ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.