ಧರ್ಮೋಪದೇಶಕಾಂಡ 23:14 - ಪರಿಶುದ್ದ ಬೈಬಲ್14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವದಕ್ಕೂ ಶತ್ರುಗಳನ್ನು ನಿಮ್ಮ ಕೈವಶಮಾಡುವದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದದರಿಂದ ಪಾಳೆಯವು ನಿರ್ಮಲವಾಗಿರಬೇಕು; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಕ್ಷಿಸುವುದಕ್ಕೂ, ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವುದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾರೆ. ಅವರು ನಿಮ್ಮಲ್ಲಿ ಅಶುದ್ಧವಾದ ಕಾರ್ಯವನ್ನು ನೋಡಿ, ನಿಮ್ಮನ್ನು ಬಿಟ್ಟು ತಿರುಗಿಹೋಗದಂತೆ ನಿಮ್ಮ ಪಾಳೆಯವು ನಿರ್ಮಲವಾಗಿರಬೇಕು. ಅಧ್ಯಾಯವನ್ನು ನೋಡಿ |