Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:18 - ಪರಿಶುದ್ದ ಬೈಬಲ್‌

18 ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸೂಳೆತನದಿಂದಾಗಲಿ ಜಾರತ್ವದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಸರ್ವೇಶ್ವರನ ಮಂದಿರದೊಳಗೆ ತರಲೇಬಾರದು; ಈ ಎರಡೂ ಅವರಿಗೆ ಅಸಹ್ಯವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸೂಳೆತನದಿಂದಾಗಲಿ ಗುದಮೈಥುನದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಮಂದಿರದೊಳಗೆ ತರಲೇಬಾರದು; ಈ ಎರಡೂ ಆತನಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯು ಸೂಳೆಗಾರಿಕೆಯಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ದೇವ ಮಂದಿರದೊಳಗೆ ತರಬಾರದು. ಏಕೆಂದರೆ ಅವೆರಡನ್ನು ನಿನ್ನ ದೇವರಾದ ಯೆಹೋವ ದೇವರು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:18
21 ತಿಳಿವುಗಳ ಹೋಲಿಕೆ  

ಕೇಡುಮಾಡುವಂಥ ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಅವರು ನಾಯಿಗಳಂತಿದ್ದಾರೆ. ಸುನ್ನತಿ ಎಂದು ಹೇಳಿಕೊಂಡು ಅಂಗಚ್ಛೇದನೆ ಮಾಡುವವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.


ನಿಜವಾಗಿ ಈ ಗಾದೆಗಳಂತೆಯೇ ಅವರು ಮಾಡಿದರು: “ನಾಯಿಯು ತಾನು ಕಕ್ಕಿದ್ದನ್ನೇ ನೆಕ್ಕಲು ತಿರುಗಿಕೊಂಡಿತು” ಮತ್ತು “ತೊಳೆದ ಹಂದಿಯು ಕೆಸರಿನಲ್ಲಿ ಹೊರಳಾಡಲು ಹೋಯಿತು.”


ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?


ವೇಶ್ಯೆಯರು ತಮ್ಮೊಡನೆ ಕೂಡುವದಕ್ಕಾಗಿ ಪುರುಷರಿಂದ ಹಣ ವಸೂಲಿ ಮಾಡುವರು. ಆದರೆ ನಿನ್ನ ಪ್ರಿಯತಮರಿಗೆ ನೀನೇ ಹಣವನ್ನು ಕೊಟ್ಟಿರುವೆ. ನಿನ್ನೊಂದಿಗೆ ಸಂಭೋಗ ಮಾಡಲು ನೀನೇ ಅವರಿಗೆ ಹಣವನ್ನು ಕೊಟ್ಟಿರುವೆ.


ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹಿಂತಿರುಗುವಂತೆ ಮೂಢನು ತನ್ನ ಮೂಢತನವನ್ನು ಪದೇಪದೇ ಮಾಡುವನು.


ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.


“ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.


“ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು. ಅದು ಭಯಂಕರ ಪಾಪ!


ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.


ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.


“ಯಾವನಾದರೂ ಸ್ವಇಚ್ಛೆಯ ಕಾಣಿಕೆಗಾಗಲಿ ಹರಕೆಯನ್ನು ಸಲ್ಲಿಸುವುದಕ್ಕಾಗಲಿ ಸಮಾಧಾನಯಜ್ಞ ಅರ್ಪಿಸಬಹುದು ಅಥವಾ ಆ ವ್ಯಕ್ತಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರೆ, ಅವನು ಅದರ ಯಜ್ಞಮಾಂಸವನ್ನು ಸಮರ್ಪಿಸಿದ ದಿನದಲ್ಲಿಯೇ ತಿನ್ನಬೇಕು. ಉಳಿದದ್ದನ್ನು ಮರುದಿನ ತಿನ್ನಬೇಕು.


“ಮಗಳನ್ನು ಸೂಳೆಯನ್ನಾಗಿ ಮಾಡಬಾರದು. ಇದರಿಂದ ಸೂಳೆಗಾರಿಕೆ ಹೆಚ್ಚಾಗುತ್ತದೆ. ನಿಮ್ಮ ದೇಶದಲ್ಲಿ ಸೂಳೆಗಾರಿಕೆ ಇರದಂತೆ ನೋಡಿಕೊಳ್ಳಿರಿ. ಇಂಥ ಪಾಪದಿಂದ ನಿಮ್ಮ ದೇಶವು ತುಂಬಿಹೋಗಲು ಬಿಡಬೇಡಿರಿ.


“ಒಬ್ಬನು ಸ್ತ್ರೀಯೊಂದಿಗೆ ಸಂಗಮಿಸುವಂತೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ಈ ಇಬ್ಬರೂ ಭಯಂಕರವಾದ ಪಾಪ ಮಾಡಿದವರಾಗಿದ್ದಾರೆ. ಅವರಿಗೆ ಮರಣಶಿಕ್ಷೆಯಾಗಬೇಕು. ಅವರು ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.


ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆಕೆಯ ವಿಗ್ರಹಗಳೆಲ್ಲಾ ಒಡೆದು ಪುಡಿಮಾಡಲ್ಪಡುವವು. ಆಕೆಯ ಸೂಳೆತನದ ಹಣವು ಬೆಂಕಿಯಲ್ಲಿ ಸುಡಲ್ಪಡುವುದು. ಆಕೆಯ ಸುಳ್ಳುದೇವರ ವಿಗ್ರಹಗಳನ್ನೆಲ್ಲಾ ನಾಶಮಾಡುವೆನು. ಯಾಕೆಂದರೆ ಸಮಾರ್ಯ ನನಗೆ ಅಪನಂಬಿಗಸ್ತಳಾಗಿ ಧನಿಕಳಾದಳು. ನನಗೆ ನಂಬಿಗಸ್ತರಲ್ಲದವರು ಆಕೆಯಿಂದ ಅದನ್ನು ಕಸಿದುಕೊಳ್ಳುವರು.


ಇತರ ದೇವರುಗಳ ಸೇವೆಗಾಗಿ ತಮ್ಮ ದೇಹಗಳನ್ನು ಲೈಂಗಿಕ ಸಂಬಂಧಕ್ಕೆ ಮಾರಾಟ ಮಾಡುವ ಗಂಡಸರೂ ಅಲ್ಲಿದ್ದರು. ಯೆಹೂದದ ಜನರು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಆ ದೇಶದಲ್ಲಿ ಇವರಿಗಿಂತ ಮುಂಚೆ ನೆಲಸಿದ್ದ ಜನರು ಇಂತಹ ದುಷ್ಕೃತ್ಯಗಳನ್ನು ಮಾಡುತ್ತಿದ್ದರು. ದೇವರು ಆ ಜನರಿಂದ ಈ ದೇಶವನ್ನು ತೆಗೆದುಕೊಂಡು ಇಸ್ರೇಲರಿಗೆ ಕೊಟ್ಟಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು