Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:20 - ಪರಿಶುದ್ದ ಬೈಬಲ್‌

20 ಪರದೇಶಸ್ಥರಿಗೆ ನೀವು ಬಡ್ಡಿಗೆ ಸಾಲ ಕೊಡಬಹುದು. ಆದರೆ ಸ್ವದೇಶದವನಾದ ಇಸ್ರೇಲಿನವನಿಗೆ ಬಡ್ಡಿಗೆ ಸಾಲ ಕೊಡಬಾರದು. ನೀವು ಹೀಗೆ ಮಾಡಿದ್ದಲ್ಲಿ, ನೀವು ಹೋಗಿ ನೆಲೆಸುವ ದೇಶದಲ್ಲಿ ನೀವು ಮಾಡುವ ಪ್ರತಿಯೊಂದರಲ್ಲೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಕೈಗೂಡಿಸಿ ಅಭಿವೃದ್ಧಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಹೊಂದುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸಹೋದರನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೆಲಸಗಳನ್ನು ಆಶೀರ್ವದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:20
16 ತಿಳಿವುಗಳ ಹೋಲಿಕೆ  

“ಆ ಬಡ ಮನುಷ್ಯನಿಗೆ ನಿಮ್ಮಿಂದ ಎಷ್ಟು ಸಹಾಯ ಮಾಡಲು ಸಾಧ್ಯವಿದೆಯೋ ಅಷ್ಟು ಸಹಾಯಮಾಡಿ; ಕೊಡುವುದಕ್ಕೆ ಬೇಸರಪಡಬೇಡಿ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಒಳ್ಳೆಯ ಕಾರ್ಯಗಳಿಗಾಗಿ ನಿಮ್ಮನ್ನು ಆಶೀರ್ವದಿಸುವನು; ನಿಮ್ಮ ಕೆಲಸವನ್ನೆಲ್ಲಾ ಸಫಲಪಡಿಸುವನು.


ಸಾಲಗಾರನು ಪರದೇಶಿಯಾಗಿದ್ದರೆ ಅವನು ಸಾಲ ಹಿಂತಿರುಗಿಸಬೇಕು. ಆದರೆ ಇಸ್ರೇಲರಲ್ಲಿ ಯಾರಾದರೂ ನಿಮ್ಮಿಂದ ಸಾಲ ತೆಗೆದುಕೊಂಡಿದ್ದರೆ ಅದನ್ನು ವಜಾ ಮಾಡಬೇಕು.


“ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.


“ನೀವು ನನ್ನ ಮಾತನ್ನು ಕೇಳಿದರೆ ನಿಮ್ಮ ದೇಶದ ಉತ್ತಮ ಫಸಲುಗಳಿಂದ ಆನಂದಿಸುವಿರಿ.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ಯೆಹೋವನು ತನ್ನ ಆಶೀರ್ವಾದಗಳೆಂಬ ಭಂಡಾರವನ್ನೇ ನಿಮಗೆ ತೆರೆಯುವನು. ಕಾಲಕ್ಕೆ ತಕ್ಕಹಾಗೆ ಮಳೆ ಸುರಿಯುವಂತೆ ಮಾಡುವನು; ನಿಮ್ಮ ಕಾರ್ಯವನ್ನೆಲ್ಲಾ ಸಫಲ ಮಾಡುವನು. ಇತರ ದೇಶಗಳಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದು; ಬೇರೆಯವರಿಂದ ಸಾಲ ತೆಗೆದುಕೊಳ್ಳುವ ಅವಶ್ಯಕತೆ ನಿಮಗೆ ಬಾರದು.


“ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.


ಅವನಿಗೆ ನೀವು ಸಾಲ ಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ದೇವರನ್ನು ಗೌರವಿಸಿರಿ. ನಿಮ್ಮ ಸ್ವಂತ ದೇಶದವನು ನಿಮ್ಮ ಸಂಗಡ ವಾಸಿಸಲಿ.


ನನ್ನ ಕೋಪವು ಶಾಂತವಾದ ಬಳಿಕ ಧನಿಕರ ಮತ್ತು ಅಧಿಕಾರಿಗಳ ಬಳಿಗೆ ಹೋಗಿ, “ನೀವು ನಿಮ್ಮ ಸ್ವಂತ ಜನರಿಗೆ ಕೊಟ್ಟಿರುವ ಸಾಲಕ್ಕೆ ಬಡ್ಡಿಯನ್ನು ಕೊಡಲು ಬಲವಂತ ಮಾಡುತ್ತಿದ್ದೀರಿ. ನೀವು ಕೂಡಲೇ ಅದನ್ನು ನಿಲ್ಲಿಸಬೇಕು” ಎಂದೆನು. ಅನಂತರ ನಾನು ಎಲ್ಲಾ ಜನರನ್ನು ಒಟ್ಟುಗೂಡಿಸಿ,


ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.


ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು.


ಅವನು ಸಾಲ ಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.


ನಿಮ್ಮ ಮೇಲೆ ಕೋಪಗೊಳ್ಳುವೆನು; ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ಆಗ ನಿಮ್ಮ ಹೆಂಡತಿಯರು ವಿಧವೆಯರಾಗುವರು; ನಿಮ್ಮ ಮಕ್ಕಳು ಅನಾಥರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು