ಧರ್ಮೋಪದೇಶಕಾಂಡ 23:23 - ಪರಿಶುದ್ದ ಬೈಬಲ್23 ಆದರೆ ನೀವು ಮಾಡಿದ ಹರಕೆಯನ್ನು ಪೂರೈಸಬೇಕು. ನೀವು ಹರಕೆ ಮಾಡುವಂತೆ ದೇವರು ನಿಮ್ಮನ್ನು ಬಲವಂತ ಮಾಡಲಿಲ್ಲವಲ್ಲಾ. ಆದ್ದರಿಂದ ನೀವು ವಾಗ್ದಾನ ಮಾಡಿದ್ದನ್ನು ಪೂರೈಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಸರ್ವೇಶ್ವರನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿನ್ನ ತುಟಿಗಳಿಂದ ಹೊರಟಿದ್ದನ್ನು ಮಾಡುವುದಕ್ಕೆ ತಪ್ಪಬೇಡ. ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಬಾಯಿಯಿಂದಲೇ ನೀನು ಹರಕೆ ಮಾಡಿದಿಯಲ್ಲವೇ. ಅಧ್ಯಾಯವನ್ನು ನೋಡಿ |
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.