ಧರ್ಮೋಪದೇಶಕಾಂಡ 23:5 - ಪರಿಶುದ್ದ ಬೈಬಲ್5 ಆದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಿದ್ದುದರಿಂದ ಆ ಶಾಪವನ್ನು ನಿಮಗೆ ಆಶೀರ್ವಾದವಾಗಿ ಪರಿವರ್ತಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೂ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ, ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 (ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸಲಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು. ಅಧ್ಯಾಯವನ್ನು ನೋಡಿ |
ಬೆಯೋರನ ಮಗನಾದ ಬಿಳಾಮನನ್ನು ಕರೆಸುವುದಕ್ಕೆ ಕೆಲವು ಸಂದೇಶಕರನ್ನು ಕಳುಹಿಸಿದನು. ಬಿಳಾಮನು ಯೂಫ್ರೆಟೀಸ್ ನದಿಯ ಬಳಿ “ಪೆತೋರ್” ಎಂಬ ಸ್ಥಳದಲ್ಲಿದ್ದನು. ಬಿಳಾಮನ ಜನರು ಇಲ್ಲಿ ವಾಸಿಸುತ್ತಿದ್ದರು. ಬಾಲಾಕನು ತನ್ನ ಸಂದೇಶಕರನ್ನು ಕಳುಹಿಸಿ ಬಿಳಾಮನಿಗೆ, “ಒಂದು ಜನಾಂಗವು ಈಜಿಪ್ಟಿನಿಂದ ಬಂದಿದೆ. ಅವರು ದೇಶವನ್ನೆಲ್ಲಾ ಮುಚ್ಚಿಕೊಂಡು ನನ್ನ ಪಕ್ಕದಲ್ಲಿ ನೆಲೆಸಿದ್ದಾರೆ. ಅವರು ನಮಗಿಂತ ಬಲಿಷ್ಠರು.