Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:8 - ಪರಿಶುದ್ದ ಬೈಬಲ್‌

8 ಎದೋಮ್ಯರ ಮತ್ತು ಈಜಿಪ್ಟಿನವರ ಮೂರನೆ ತಲೆಮಾರಿನವರು ಇಸ್ರೇಲರೊಂದಿಗೆ ದೇವಾರಾಧನೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಸರ್ವೇಶ್ವರನ ಸಭೆಗೆ ಸೇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರಿಗೆ ಹುಟ್ಟುವ ಮಕ್ಕಳಲ್ಲಿ ಮೂರನೆಯ ತಲಾಂತರದವರು ಯೆಹೋವ ದೇವರ ಸಭೆಯಲ್ಲಿ ಸೇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:8
15 ತಿಳಿವುಗಳ ಹೋಲಿಕೆ  

“ಎದೋಮ್ಯರನ್ನು ನೀವು ದ್ವೇಷಿಸಬಾರದು, ಅವರು ನಿಮ್ಮ ಸಂಬಂಧಿಕರಾಗಿದ್ದಾರೆ. ಈಜಿಪ್ಟಿನವರನ್ನು ನೀವು ದ್ವೇಷಿಸಬಾರದು, ಅವರ ದೇಶದಲ್ಲಿ ನೀವು ಪರದೇಶಿಗಳಾಗಿದ್ದಿರಲ್ಲಾ.


“ನಿಮ್ಮ ಸೈನ್ಯವು ವೈರಿಗಳೊಂದಿಗೆ ಯುದ್ಧಮಾಡಲು ಹೋದಾಗ ನಿಮ್ಮನ್ನು ಅಶುದ್ಧಪಡಿಸುವ ಪ್ರತಿಯೊಂದರಿಂದಲೂ ನೀವು ದೂರವಾಗಿರಿ.


ಮೊದಲನೆಯ ಮಗುವು ಕೆಂಪಗಿತ್ತು. ಅವನ ಚರ್ಮವು ಕೂದಲಿನ ಉಡುಪಿನಂತಿತ್ತು. ಆದ್ದರಿಂದ ಅವನಿಗೆ “ಏಸಾವ್” ಎಂದು ಹೆಸರಿಡಲಾಯಿತು.


ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು.


“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.


ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!


ಆದ್ದರಿಂದ ನೀವೂ ಪರದೇಶಿಯರನ್ನು ಪ್ರೀತಿಸಬೇಕು. ನೀವೂ ಸಹ ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದಿರಿ.


ಈಜಿಪ್ಟಿನವನೊಬ್ಬನು ಹೊಲದಲ್ಲಿ ಬಿದ್ದಿರುವುದನ್ನು ದಾವೀದನ ಜನರು ಕಂಡರು. ಅವರು ಈಜಿಪ್ಟಿನವನನ್ನು ದಾವೀದನ ಹತ್ತಿರಕ್ಕೆ ತಂದರು. ಅವರು ಈಜಿಪ್ಟಿನವನಿಗೆ ಕುಡಿಯಲು ನೀರನ್ನು ಮತ್ತು ತಿನ್ನಲು ಆಹಾರವನ್ನು ಕೊಟ್ಟರು.


ಸೊಲೊಮೋನನು ಈಜಿಪ್ಟಿನ ರಾಜನಾದ ಫರೋಹನ ಮಗಳನ್ನು ಮದುವೆಯಾಗಿ ಅವನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಸೊಲೊಮೋನನು ಅವಳನ್ನು ದಾವೀದನಗರಕ್ಕೆ ಕರೆದು ತಂದನು. ಸೊಲೊಮೋನನು ಆ ಸಮಯದಲ್ಲಿ ತನ್ನ ಅರಮನೆಯನ್ನು ಮತ್ತು ಯೆಹೋವನ ದೇವಾಲಯಗಳನ್ನು ನಿರ್ಮಿಸುತ್ತಿದ್ದನು. ಜೆರುಸಲೇಮಿನ ಸುತ್ತಲೂ ಒಂದು ಗೋಡೆಯನ್ನು ಸಹ ಸೊಲೊಮೋನನು ನಿರ್ಮಿಸುತ್ತಿದ್ದನು.


ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


ನೀನು ನಾಚಿಕೆಯಿಂದ ಮುಚ್ಚಲ್ಪಡುವೆ, ನಿರಂತರಕ್ಕೂ ನಾಶವಾಗುವೆ. ಯಾಕೆಂದರೆ ನೀನು ನಿನ್ನ ಸಹೋದರನಾದ ಯಾಕೋಬನೊಂದಿಗೆ ಕ್ರೂರವಾಗಿ ನಡೆದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು