Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:9 - ಪರಿಶುದ್ದ ಬೈಬಲ್‌

9 “ನಿಮ್ಮ ಸೈನ್ಯವು ವೈರಿಗಳೊಂದಿಗೆ ಯುದ್ಧಮಾಡಲು ಹೋದಾಗ ನಿಮ್ಮನ್ನು ಅಶುದ್ಧಪಡಿಸುವ ಪ್ರತಿಯೊಂದರಿಂದಲೂ ನೀವು ದೂರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುಚಿಯೂ ಆಗದಂತೆ ಎಚ್ಚರಿಕೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುಚಿಯೂ ಆಗದಂತೆ ಎಚ್ಚರದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಶತ್ರುಗಳಿಗೆ ವಿರೋಧವಾಗಿ ಸೈನ್ಯವಾಗಿ ಹೊರಟರೆ, ಪಾಳೆಯದಲ್ಲಿ ಯಾವ ಅಶುದ್ಧ ಕಾರ್ಯಗಳು ಇಲ್ಲದಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:9
11 ತಿಳಿವುಗಳ ಹೋಲಿಕೆ  

ಅಲ್ಲದೆ ನಾವು ಉಳಿದೆಲ್ಲವನ್ನು ನಾಶಪಡಿಸಬೇಕೆಂಬುದನ್ನು ನೆನಪಿಡಿ. ಅವರ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ನೀವು ಅವರ ವಸ್ತುಗಳನ್ನು ತೆಗೆದುಕೊಂಡರೆ ಮತ್ತು ಅವುಗಳನ್ನು ನಮ್ಮ ಪಾಳೆಯಕ್ಕೆ ತಂದರೆ ನೀವೇ ನಾಶವಾಗುವಿರಿ; ಇಸ್ರೇಲಿನ ಎಲ್ಲಾ ಜನರಿಗೆ ಕಷ್ಟವನ್ನುಂಟುಮಾಡುವಿರಿ.


ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಬೇರ್ಷೆಬ ನಗರದಿಂದ ಹಿಡಿದು ಎಫ್ರಾಯೀಮ್ ಬೆಟ್ಟದ ಪ್ರದೇಶದ ಜನರನ್ನೆಲ್ಲಾ ಸಂದರ್ಶಿಸಿದನು. ಯೆಹೋಷಾಫಾಟನು ಈ ಜನರನ್ನೆಲ್ಲ ಅವರ ಪೂರ್ವಿಕರ ದೇವರಾದ ಯೆಹೋವನ ಬಳಿಗೆ ಮತ್ತೆ ಕರೆದುಕೊಂಡು ಬಂದನು.


ಆಗ ಇಸ್ರೇಲಿನ ಜನರೆಲ್ಲರು ಬೇತೇಲಿಗೆ ಹೋದರು. ಅಲ್ಲಿ ಅವರು ಕುಳಿತುಕೊಂಡು ಯೆಹೋವನಿಗೆ ಮೊರೆಯಿಟ್ಟರು. ಅವರು ಸಾಯಂಕಾಲದವರೆಗೆ ಏನೂ ತಿನ್ನಲಿಲ್ಲ. ಇದಲ್ಲದೆ ಅವರು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.


ಹೀಗೆ ಅರಸನಾದ ಹಿಜ್ಕೀಯನು ಯೆಹೂದ ದೇಶದಲ್ಲಿ ಈ ಒಳ್ಳೆಯ ಕಾರ್ಯವನ್ನು ಮಾಡಿದನು. ದೇವರಾದ ಯೆಹೋವನ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ನಂಬಿಗಸ್ತಿಕೆಯಿಂದ ಮಾಡಿದನು.


ಎದೋಮ್ಯರ ಮತ್ತು ಈಜಿಪ್ಟಿನವರ ಮೂರನೆ ತಲೆಮಾರಿನವರು ಇಸ್ರೇಲರೊಂದಿಗೆ ದೇವಾರಾಧನೆ ಮಾಡಬಹುದು.


ಒಬ್ಬನಿಗೆ ರಾತ್ರಿ ಕಾಲದಲ್ಲಿ ವೀರ್ಯಸ್ಖಲನವಾದರೆ ಅವನು ಪಾಳೆಯದಿಂದ ಹೊರಗೆ ಹೋಗಿ ಪ್ರತ್ಯೇಕವಾಗಿರಬೇಕು.


ಯೆಹೂದ್ಯರಲ್ಲದ ಜನರು ಯೆಹೋವನ ಬಳಿಗೆ ಬರುವರು. ಅವರು, “ಯೆಹೋವನು ನಮ್ಮನ್ನು ತನ್ನ ಜನರೊಂದಿಗೆ ಸ್ವೀಕರಿಸುವದಿಲ್ಲ” ಎಂದು ಹೇಳಬಾರದು. ಕಂಚುಕಿಯು, “ನಾನು ಕೆಲಸಕ್ಕೆ ಬಾರದ ಒಣಗಿದ ಮರ.” ಎಂದು ಹೇಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು