Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:1 - ಪರಿಶುದ್ದ ಬೈಬಲ್‌

1 “ಒಬ್ಬಾಕೆಯನ್ನು ಒಬ್ಬನು ಮದುವೆಯಾದ ಬಳಿಕ, ಅವಳಲ್ಲಿ ನಾಚಿಕೆಕರವಾದದ್ದೇನಾದರೂ ಇದ್ದರೆ ಅವನು ವಿವಾಹವಿಚ್ಛೇದನಾ ಪತ್ರಗಳಿಗೆ ಸಹಿಹಾಕಿ ಅವಳ ಕೈಯಲ್ಲಿ ಕೊಡಬೇಕು. ಆಮೇಲೆ ಆಕೆಯನ್ನು ತನ್ನ ಮನೆಯಿಂದ ಹೊರಗೆ ಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು, ಅವಳಲ್ಲಿ ಸಂತೋಷಪಡದೆ, ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಿಬಿಟ್ಟನೆಂದು ಇಟ್ಟುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಿಬಿಟ್ಟಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಅಸಂತೃಪ್ತನಾದರೆ, ವಿವಾಹ ವಿಚ್ಛೇದನ ಪತ್ರವನ್ನು ಬರೆದು, ಅವಳ ಕೈಯಲ್ಲಿ ಕೊಟ್ಟು, ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಟ್ಟಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:1
19 ತಿಳಿವುಗಳ ಹೋಲಿಕೆ  

ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲೆ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು.


ಹಿರಿಯರು ಅವನಿಂದ ನಲವತ್ತು ತೊಲೆ ಬೆಳ್ಳಿಯನ್ನು ಹುಡುಗಿಯ ತಂದೆಗೆ ಕೊಡಿಸಬೇಕು. ಯಾಕೆಂದರೆ ಒಬ್ಬ ಇಸ್ರೇಲಿನ ಹುಡುಗಿಗೆ ಅವನು ಅವಮಾನಪಡಿಸಿದ ಕಾರಣ ಆ ಹುಡುಗಿಯು ಅವನ ಹೆಂಡತಿಯಾಗಿಯೇ ಬಾಳಬೇಕು. ಅವನು ಆಕೆಯನ್ನು ಎಂದಿಗೂ ವಿವಾಹವಿಚ್ಛೇದನೆ ಮಾಡಬಾರದು.


“ಒಬ್ಬ ಪುರುಷನು ಒಬ್ಬ ಸ್ತ್ರೀಯನ್ನು ಮದುವೆಯಾಗಿ ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದು ಆಮೇಲೆ ಆಕೆಯನ್ನು ಇಷ್ಟಪಡದೆ,


ಆಕೆಯ ಹೊಸ ಗಂಡನೂ ಆಕೆಯನ್ನು ಇಷ್ಟಪಡದೆ ಮನೆಯಿಂದ ಹೊರಗೆ ಕಳುಹಿಸಿದರೆ ಅಥವಾ ಎರಡನೆ ಗಂಡನು ಸತ್ತುಹೋದರೆ ಆಕೆಯ ಮೊದಲನೆಯ ಗಂಡನು ಆಕೆಯನ್ನು ಮತ್ತೆ ಮದುವೆಯಾಗಬಾರದು. ಅವನಿಗೆ ಆಕೆಯು ಅಶುದ್ಧಳಾದಳು. ಅವನು ಆಕೆಯನ್ನು ಮತ್ತೆ ಮದುವೆಯಾದಲ್ಲಿ ಅವನು ಯೆಹೋವನಿಗೆ ಅಸಹ್ಯವಾದದ್ದನ್ನು ಮಾಡುವವನಾಗಿದ್ದಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಇಂಥ ಪಾಪಗಳನ್ನು ಮಾಡಬಾರದು.


“ಯಜಮಾನನು ಇನ್ನೊಬ್ಬ ಸ್ತ್ರೀಯನ್ನು ಮದುವೆಯಾದರೆ, ಅವನು ತನ್ನ ಮೊದಲನೆಯ ಹೆಂಡತಿಗೆ ಅವನು ಕೊಡುವ ಆಹಾರ ಅಥವಾ ಬಟ್ಟೆಬರೆಗಳಲ್ಲಿ ಏನೂ ಕಡಿಮೆ ಮಾಡಬಾರದು; ಮದುವೆಯ ಮೂಲಕ ಆಕೆಯು ಯಾವ್ಯಾವ ವಸ್ತುಗಳನ್ನು ಹೊಂದಲು ಹಕ್ಕು ಪಡೆದಿರುತ್ತಾಳೊ ಅವೆಲ್ಲವನ್ನು ಅವನು ಆಕೆಗೆ ಕೊಡಬೇಕು.


“ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”


ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.


ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, “ವಿವಾಹವಿಚ್ಪೇದನೆಯನ್ನು ನಾನು ಹಗೆ ಮಾಡುತ್ತೇನೆ. ಮತ್ತು ಮನುಷ್ಯನು ಮಾಡುವ ದುಷ್ಕೃತ್ಯವನ್ನು ನಾನು ಹಗೆ ಮಾಡುತ್ತೇನೆ. ಆದ್ದರಿಂದ ನಿಮ್ಮ ಆತ್ಮೀಯ ಒಗ್ಗಟ್ಟನ್ನು ಕಾಪಾಡಿಕೊಳ್ಳಿರಿ. ನಿಮ್ಮ ಹೆಂಡತಿಯರಿಗೆ ಮೋಸ ಮಾಡಬೇಡಿರಿ.”


“ಒಬ್ಬ ಪುರುಷನಿಗೆ ಇಬ್ಬರು ಹೆಂಡತಿಯರಿದ್ದರೆ ಅವರಲ್ಲಿ ಒಬ್ಬಾಕೆಯನ್ನು ಅವನು ಹೆಚ್ಚಾಗಿ ಪ್ರೀತಿಸಿದರೂ ಪ್ರೀತಿಸಬಹುದು. ಆ ಇಬ್ಬರು ಅವನಿಗೆ ಮಕ್ಕಳನ್ನು ಹೆರುವರು. ಹಿರಿಮಗನು ತಾನು ಪ್ರೀತಿಸದ ಹೆಂಡತಿಯಲ್ಲಿ ಹುಟ್ಟಿದರೆ,


“ಈ ವಿಷಯಗಳನ್ನು ಇಸ್ರೇಲರಿಗೆ ಹೇಳು: ಒಬ್ಬನ ಹೆಂಡತಿ ಸನ್ಮಾರ್ಗವನ್ನು ಬಿಟ್ಟು ತನ್ನ ಗಂಡನಿಗೆ ಅಪನಂಬಿಗಸ್ತಳಾಗಿದ್ದು,


ಆದರೆ ಅವಳು ತನ್ನ ಗಂಡನಿಗೆ ವಿರುದ್ಧವಾಗಿ ಪಾಪ ಮಾಡದೆ ಶುದ್ಧಳಾಗಿದ್ದರೆ, ಯಾಜಕನು ಅವಳನ್ನು ದೋಷಿಯಲ್ಲವೆಂದು ಹೇಳುವನು. ಆಗ ಅವಳಿಗೆ ಯಾವ ಹಾನಿಯಾಗದೆ, ಇನ್ನೂ ಮಕ್ಕಳನ್ನು ಹೆರಲು ಶಕ್ತಳಾಗಿರುವಳು.


ಅವನ ಮನೆಯಿಂದ ಅವಳು ಹೊರಗೆ ಕಳುಹಿಸಲ್ಪಟ್ಟ ಮೇಲೆ ಆಕೆ ಬೇರೊಬ್ಬನನ್ನು ಮದುವೆಯಾಗಬಹುದು.


ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು