Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:13 - ಪರಿಶುದ್ದ ಬೈಬಲ್‌

13 ಪ್ರತೀ ಸಾಯಂಕಾಲ ಆ ಕಂಬಳಿಯನ್ನು ಹಿಂದಕ್ಕೆ ಕೊಡಬೇಕು. ಆಗ ಅವನಿಗೆ ರಾತ್ರಿ ಹೊದ್ದುಕೊಳ್ಳಲು ಇರುವುದು. ಅವನು ನಿನ್ನನ್ನು ಆಶೀರ್ವದಿಸುವನು. ಅಲ್ಲದೆ ದೇವರಾದ ಯೆಹೋವನು ನಿಮ್ಮ ಆ ಒಳ್ಳೆಯ ಕಾರ್ಯವನ್ನು ಗಣನೆಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೊತ್ತುಮುಳುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು; ಅದನ್ನು ಇಟ್ಟುಕೊಂಡು ನೀವು ರಾತ್ರಿ ಮಗಲಬಾರದು; ಅವನು ಅದನ್ನು ಹೊದ್ದುಕೊಂಡು ಮಲಗಿಕೊಳ್ಳಬೇಕಲ್ಲವೆ? ಅದಲ್ಲದೆ, ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಸರ್ವೇಶ್ವರ ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ನೆರೆಯವನು ಅದರಲ್ಲಿ ಮಲಗಲು ಸಾಯಂಕಾಲದ ಹೊತ್ತಿಗೆ ಅವನು ಹೊದ್ದುಕೊಳ್ಳುವ ವಸ್ತ್ರವನ್ನು ಹಿಂತಿರುಗಿಸು. ಆಗ ಅವನು ನಿನ್ನನ್ನು ಆಶೀರ್ವದಿಸುವನು. ನೀನು ಮಾಡಿದ್ದು ನಿನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ನೀತಿಯ ಕಾರ್ಯವೆಂದು ಪರಿಗಣಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:13
24 ತಿಳಿವುಗಳ ಹೋಲಿಕೆ  

ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ, ಇಡೀ ಧರ್ಮಶಾಸ್ತ್ರಕ್ಕೆ ನಾವು ಚಾಚೂತಪ್ಪದೆ ಎಚ್ಚರಿಕೆಯಿಂದ ವಿಧೇಯರಾದರೆ, ನಾವು ಒಳ್ಳೆಯದನ್ನು ಮಾಡಿದೆವೆಂದು ದೇವರು ಹೇಳುತ್ತಾನೆ.’


ಸೂರ್ಯ ಮುಳುಗುವುದರೊಳಗೆ ಅವನಿಗೆ ಸಲ್ಲಬೇಕಾದ ಕೂಲಿಯನ್ನು ಕೊಟ್ಟುಬಿಡು, ಅವನು ಬಡವನಾಗಿದ್ದಾನೆ. ನೀನು ಕೊಡುವ ಕೂಲಿಯಿಂದಲೇ ಅವನು ತನ್ನ ಹಸಿವನ್ನು ನೀಗಿಸಿಕೊಳ್ಳಬೇಕು. ನೀನು ಅವನ ಕೂಲಿ ಕೊಡದಿದ್ದಲ್ಲಿ ಅವನು ದೇವರಾದ ಯೆಹೋವನಿಗೆ ದೂರು ಹೇಳುವನು. ಆಗ ನೀನು ಪಾಪಮಾಡುವವನಾಗಿರುವೆ.


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ಕೋಪಗೊಂಡರೂ ಪಾಪ ಮಾಡಬೇಡಿ ಮತ್ತು ದಿನವೆಲ್ಲಾ ಕೋಪದಿಂದಿರಬೇಡಿ.


ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತುಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರು ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡುಕೊಂಡು ದೇವರ ಆಲಯದಲ್ಲಿ ಕುಡಿಯುವರು.


ಒತ್ತೆ ತೆಗೆದುಕೊಂಡಿದ್ದ ವಸ್ತುಗಳನ್ನು ಹಿಂದಕ್ಕೆ ಕೊಟ್ಟು, ತಾನು ಕದ್ದುಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಕರವಾದ ಕಟ್ಟಳೆಗಳನ್ನು ಅನುಸರಿಸಿದರೆ ಆ ಮನುಷ್ಯನು ಖಂಡಿತವಾಗಿ ಬದುಕುವನು. ಅವನನ್ನು ಸಾಯಿಸುವುದಿಲ್ಲ.


ಬಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಬಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಬಹುದು. ಒತ್ತೆಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಬಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಬಹುದು.


ಆ ಒಳ್ಳೆಯ ಮನುಷ್ಯನು ಜನರ ಬಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನ್ನು ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು;


ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳ್ಳೆಯತನವು ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ಅಬ್ರಾಮನು ಯೆಹೋವನನ್ನು ನಂಬಿದನು. ಆ ನಂಬಿಕೆಯ ನಿಮಿತ್ತವೇ ಯೆಹೋವನು ಅಬ್ರಾಮನನ್ನು ನೀತಿವಂತನೆಂದು ಪರಿಗಣಿಸಿದನು.


ಆ ಒಳ್ಳೆಯ ಮಗನು ಯಾರ ಮೇಲೂ ದಬ್ಬಾಳಿಕೆ ನಡೆಸುವುದಿಲ್ಲ. ಅವನು ಒತ್ತೆಯಿಲ್ಲದೆ ಸಾಲಕೊಡುವನು. ಅವನು ಯಾರನ್ನೂ ದರೋಡೆ ಮಾಡುವುದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಬಟ್ಟೆಯಿಲ್ಲದವರಿಗೆ ಬಟ್ಟೆಯನ್ನು ಕೊಡುವನು.


ಅವನು ಬಡವನಾದರೆ ಅವನು ತನ್ನ ಕಂಬಳಿಯನ್ನೇ ತಂದುಕೊಡಬಹುದು. ಅದನ್ನು ರಾತ್ರಿ ಇಟ್ಟುಕೊಳ್ಳಬಾರದು.


“ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು