ಧರ್ಮೋಪದೇಶಕಾಂಡ 24:15 - ಪರಿಶುದ್ದ ಬೈಬಲ್15 ಸೂರ್ಯ ಮುಳುಗುವುದರೊಳಗೆ ಅವನಿಗೆ ಸಲ್ಲಬೇಕಾದ ಕೂಲಿಯನ್ನು ಕೊಟ್ಟುಬಿಡು, ಅವನು ಬಡವನಾಗಿದ್ದಾನೆ. ನೀನು ಕೊಡುವ ಕೂಲಿಯಿಂದಲೇ ಅವನು ತನ್ನ ಹಸಿವನ್ನು ನೀಗಿಸಿಕೊಳ್ಳಬೇಕು. ನೀನು ಅವನ ಕೂಲಿ ಕೊಡದಿದ್ದಲ್ಲಿ ಅವನು ದೇವರಾದ ಯೆಹೋವನಿಗೆ ದೂರು ಹೇಳುವನು. ಆಗ ನೀನು ಪಾಪಮಾಡುವವನಾಗಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಳುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಟ್ಟುಬಿಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ ಅವನು ಸರ್ವೇಶ್ವರನಿಗೆ ಮೊರೆಯಿಡುವನು; ಆಗ ನೀವು ದೋಷಿಗಳಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತು ಮುಣುಗುವದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವನ ದಿನದ ಕೂಲಿಯನ್ನು ಆ ದಿನದಲ್ಲೇ ಸೂರ್ಯನು ಮುಳುಗುವುದರೊಳಗೆ ಅವನಿಗೆ ಕೊಡಬೇಕು. ಏಕೆಂದರೆ ಅವನು ಬಡವನಾಗಿದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ, ಅವನು ನಿನಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆಯಿಡುವನು. ಆಗ ನಿನ್ನ ಮೇಲೆ ಪಾಪದ ಹೊರೆ ಬಿದ್ದೀತು. ಅಧ್ಯಾಯವನ್ನು ನೋಡಿ |
“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.