Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:17 - ಪರಿಶುದ್ದ ಬೈಬಲ್‌

17 “ಪರದೇಶಸ್ಥರನ್ನು ಮತ್ತು ಅನಾಥರನ್ನು ಯೋಗ್ಯವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ವಿಧವೆಯರ ಬಟ್ಟೆಗಳನ್ನು ಒತ್ತೆಯಿಟ್ಟುಕೊಳ್ಳಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪರನಿಗೂ, ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸಬೇಡ. ವಿಧವೆಯಿಂದ ಉಡುವ ವಸ್ತ್ರವನ್ನು ಒತ್ತೆಯಾಗಿ ತೆಗೆದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:17
39 ತಿಳಿವುಗಳ ಹೋಲಿಕೆ  

ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.


“ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


“ಬಡವರಿಗೆ ವ್ಯಾಜ್ಯದಲ್ಲಿ ನೀವು ಅನ್ಯಾಯವಾದ ತೀರ್ಪನ್ನು ಕೊಡಕೂಡದು.


ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.


ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’


“ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


“ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.


ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.


ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ವಿಧವೆಯರಿಗೂ ಅನಾಥರಿಗೂ ಹಾನಿಮಾಡಬೇಡಿರಿ. ಅಪರಿಚಿತರಿಗೂ ಬಡವರಿಗೂ ಕೇಡುಮಾಡಬೇಡಿ. ಒಬ್ಬರಿಗೊಬ್ಬರು ಕೇಡುಮಾಡಲು ಯೋಚಿಸಲೂಬೇಡಿ!’”


“ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.


ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.


ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.


ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ಅವರು ಅತಿಯಾಗಿ ಕುಡಿದು ಕಟ್ಟಳೆಗಳನ್ನು ಮರೆತು ಬಡವರ ಹಕ್ಕುಗಳನ್ನೆಲ್ಲ ರದ್ದುಮಾಡುವರು.


ಪ್ರತೀ ಸಾಯಂಕಾಲ ಆ ಕಂಬಳಿಯನ್ನು ಹಿಂದಕ್ಕೆ ಕೊಡಬೇಕು. ಆಗ ಅವನಿಗೆ ರಾತ್ರಿ ಹೊದ್ದುಕೊಳ್ಳಲು ಇರುವುದು. ಅವನು ನಿನ್ನನ್ನು ಆಶೀರ್ವದಿಸುವನು. ಅಲ್ಲದೆ ದೇವರಾದ ಯೆಹೋವನು ನಿಮ್ಮ ಆ ಒಳ್ಳೆಯ ಕಾರ್ಯವನ್ನು ಗಣನೆಗೆ ತರುವನು.


“ಒಬ್ಬನು ನಿಮ್ಮಿಂದ ಏನಾದರೊಂದು ವಸ್ತುವನ್ನು ಎರವಲಾಗಿ ತೆಗೆದುಕೊಳ್ಳುವುದಾದರೆ ಅವನ ಬೀಸುವ ಕಲ್ಲಿನ ಒಂದು ಭಾಗವನ್ನು ಒತ್ತೆಯಾಗಿಟ್ಟುಕೊಳ್ಳಬಾರದು. ಇಲ್ಲವಾದರೆ ಅವನ ಆಹಾರವನ್ನೇ ಅವನಿಂದ ಕಿತ್ತುಕೊಂಡ ಹಾಗಾಯಿತು.


“ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ.


ನೀವು ಈಜಿಪ್ಟಿನಲ್ಲಿ ಬಡ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ನೀವು ಬಡವರಿಗೆ ದಯೆ ತೋರಿಸಬೇಕು.


ಯೋಬನೇ, ನೀನು ನಿಷ್ಕಾರಣವಾಗಿ ನಿನ್ನ ಸಹೋದರರ ವಸ್ತುಗಳನ್ನು ಒತ್ತೆಯಿಟ್ಟುಕೊಂಡು ಸಾಲ ಕೊಟ್ಟಿರಬಹುದು. ಜನರ ಬಟ್ಟೆಗಳನ್ನು ತೆಗೆದುಕೊಂಡು ಅವರನ್ನು ಬೆತ್ತಲೆ ಮಾಡಿರಬಹುದು.


ಅವರು ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುವರು; ವಿಧವೆಯ ಹಸುವನ್ನು ಒತ್ತೆಯಿಟ್ಟುಕೊಳ್ಳುವರು;


“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು