Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:18 - ಪರಿಶುದ್ದ ಬೈಬಲ್‌

18 ನೀವು ಈಜಿಪ್ಟಿನಲ್ಲಿ ಬಡ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ನೀವು ಬಡವರಿಗೆ ದಯೆ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀವೇ ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನುಬಿಡಿಸಿದರೆಂಬುದನ್ನು ನೆನಪುಮಾಡಿಕೊಳ್ಳಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:18
8 ತಿಳಿವುಗಳ ಹೋಲಿಕೆ  

ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಿರೆಂಬುದನ್ನು ಮರೆಯಬೇಡಿ. ನಿಮ್ಮ ದೇವರಾದ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದಲೇ ನಿಮ್ಮ ದೇವರು ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞೆ ಮಾಡಿದ್ದು.


ನೀವು ಈಜಿಪ್ಟ್ ದೇಶದಲ್ಲಿ ಬಡ ಗುಲಾಮರಾಗಿದ್ದುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆದ್ದರಿಂದಲೇ ಬಡವರಿಗೆ ನೀವು ಹೀಗೆ ಮಾಡಬೇಕೆಂದು ನಿಮಗೆ ತಿಳಿಸುತ್ತಿದ್ದೇನೆ.


ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ ಎಂದು ನೆನಪುಮಾಡಿಕೊಂಡು ಯೆಹೋವನ ವಿಧಿಗಳನ್ನು ತಪ್ಪದೇ ಅನುಸರಿಸಿರಿ.


ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.


“ನೀವೆಂದಿಗೂ ವಿಧವೆಯರಿಗೆ ಅಥವಾ ಅನಾಥ ಮಕ್ಕಳಿಗೆ ಕೇಡುಮಾಡಬಾರದು.


“ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ.


“ಪರದೇಶಸ್ಥರನ್ನು ಮತ್ತು ಅನಾಥರನ್ನು ಯೋಗ್ಯವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ವಿಧವೆಯರ ಬಟ್ಟೆಗಳನ್ನು ಒತ್ತೆಯಿಟ್ಟುಕೊಳ್ಳಕೂಡದು.


“ನೀವು ಹೊಲದಲ್ಲಿ ಬೆಳೆದ ಬೆಳೆಯನ್ನು ಕೊಯ್ದು ಮನೆಗೆ ತರುವಾಗ ಕೆಲವು ಸಿವುಡುಗಳನ್ನು ನೀವು ಹೊಲದಲ್ಲಿಯೇ ಬಿಟ್ಟು ಬಂದಿದ್ದರೆ ಅದನ್ನು ತರಲು ಹಿಂದಕ್ಕೆ ಹೋಗಬೇಡಿ. ಅದನ್ನು ನಿಮ್ಮ ಊರಿನಲ್ಲಿರುವ ಅನಾಥರಿಗೂ ವಿಧವೆಯರಿಗೂ ಪರದೇಶಸ್ಥರಿಗೂ ಬಿಡಿರಿ. ನೀವು ಹಾಗೆ ಮಾಡಿದರೆ ದೇವರಾದ ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು