Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:19 - ಪರಿಶುದ್ದ ಬೈಬಲ್‌

19 “ನೀವು ಹೊಲದಲ್ಲಿ ಬೆಳೆದ ಬೆಳೆಯನ್ನು ಕೊಯ್ದು ಮನೆಗೆ ತರುವಾಗ ಕೆಲವು ಸಿವುಡುಗಳನ್ನು ನೀವು ಹೊಲದಲ್ಲಿಯೇ ಬಿಟ್ಟು ಬಂದಿದ್ದರೆ ಅದನ್ನು ತರಲು ಹಿಂದಕ್ಕೆ ಹೋಗಬೇಡಿ. ಅದನ್ನು ನಿಮ್ಮ ಊರಿನಲ್ಲಿರುವ ಅನಾಥರಿಗೂ ವಿಧವೆಯರಿಗೂ ಪರದೇಶಸ್ಥರಿಗೂ ಬಿಡಿರಿ. ನೀವು ಹಾಗೆ ಮಾಡಿದರೆ ದೇವರಾದ ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನೀವು ಬೆಳೆಯನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರಲು ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ; ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲಿ ಕೈಗೂಡಿಸಿ ನಿಮ್ಮನ್ನು ಅಭಿವೃದ್ಧಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತು ಬಂದರೆ ಅದನ್ನು ತರುವದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ, ಹೊಲದಲ್ಲಿ ಸಿವುಡನ್ನು ಮರೆತುಬಿಟ್ಟರೆ, ಅದನ್ನು ತೆಗೆದುಕೊಳ್ಳುವುದಕ್ಕೆ ತಿರುಗಿಕೊಳ್ಳಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ನೀವು ಹೀಗೆ ನಡೆದುಕೊಂಡರೆ, ನಿನ್ನ ದೇವರಾದ ಯೆಹೋವ ದೇವರು ನಿನ್ನ ಎಲ್ಲಾ ದುಡಿಮೆಯಲ್ಲಿ ನಿನ್ನನ್ನು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:19
23 ತಿಳಿವುಗಳ ಹೋಲಿಕೆ  

“ಅಲ್ಲದೆ ನಿಮ್ಮ ದೇಶದಲ್ಲಿ ಪೈರುಗಳನ್ನು ಕೊಯ್ಯುವಾಗ ಹೊಲದ ಮೂಲೆಗಳವರೆಗೆ ಇರುವುದನ್ನೆಲ್ಲಾ ಕೊಯ್ಯಬೇಡಿರಿ. ನೆಲದ ಮೇಲೆ ಬೀಳುವ ಧಾನ್ಯಗಳನ್ನು ಹಕ್ಕಲಾಯಬಾರದು. ಬಡವರಿಗಾಗಿಯೂ ನಿಮ್ಮ ದೇಶದ ಮೂಲಕ ಪ್ರಯಾಣಮಾಡುವ ಪರದೇಶಸ್ಥರಿಗಾಗಿಯೂ ಅವುಗಳನ್ನು ಬಿಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!”


ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.”


ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ಯೆಹೋವನು ಯೋಬನ ಜೀವಿತದ ಅಂತಿಮ ಸ್ಥಿತಿಯನ್ನು ಮೊದಲನೆ ಸ್ಥಿತಿಗಿಂತಲೂ ಹೆಚ್ಚಾಗಿ ಆಶೀರ್ವದಿಸಿದನು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೊತೆ ಎತ್ತುಗಳೂ ಒಂದು ಸಾವಿರ ಹೆಣ್ಣು ಕತ್ತೆಗಳೂ ಇದ್ದವು.


ನಿನ್ನ ದೇವರಾದ ಯೆಹೋವನಿಗೆ ನೀನು ಹೀಗೆ ಹೇಳಬೇಕು: ‘ನನ್ನ ಮನೆಯೊಳಗಿಂದ ನನ್ನ ಬೆಳೆಯ ಪರಿಶುದ್ಧ ಭಾಗವನ್ನು ತೆಗೆದು ಲೇವಿಯರಿಗೆ, ಪರದೇಶಸ್ಥರಿಗೆ, ಅನಾಥರಿಗೆ, ವಿಧವೆಯರಿಗೆ ಕೊಟ್ಟಿರುತ್ತೇನೆ. ನಿನ್ನ ಕಟ್ಟಳೆಗಳನ್ನೆಲ್ಲಾ ಅನುಸರಿಸಿದ್ದೇನೆ. ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನಿರಾಕರಿಸಲಿಲ್ಲ, ನಾನು ಅವುಗಳನ್ನು ಮರೆಯಲಿಲ್ಲ.


ಅವಳಿಗಾಗಿ ಕಟ್ಟುಗಳಿಂದ ಕೆಲವು ತುಂಬು ತೆನೆಗಳನ್ನೇ ಬಿಟ್ಟು ಅವಳ ಕೆಲಸ ಸುಲಭಗೊಳಿಸಿರಿ. ಆ ಧಾನ್ಯವನ್ನು ತೆಗೆದುಕೊಂಡರೆ ಅವಳನ್ನು ಗದರಿಸಬೇಡಿ” ಎಂದು ಆಜ್ಞಾಪಿಸಿದನು.


“ಆ ಬಡ ಮನುಷ್ಯನಿಗೆ ನಿಮ್ಮಿಂದ ಎಷ್ಟು ಸಹಾಯ ಮಾಡಲು ಸಾಧ್ಯವಿದೆಯೋ ಅಷ್ಟು ಸಹಾಯಮಾಡಿ; ಕೊಡುವುದಕ್ಕೆ ಬೇಸರಪಡಬೇಡಿ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಒಳ್ಳೆಯ ಕಾರ್ಯಗಳಿಗಾಗಿ ನಿಮ್ಮನ್ನು ಆಶೀರ್ವದಿಸುವನು; ನಿಮ್ಮ ಕೆಲಸವನ್ನೆಲ್ಲಾ ಸಫಲಪಡಿಸುವನು.


“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.


ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ.


ನೀವು ಈಜಿಪ್ಟಿನಲ್ಲಿ ಬಡ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ನೀವು ಬಡವರಿಗೆ ದಯೆ ತೋರಿಸಬೇಕು.


ಒಂದು ದಿನ ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಗಳಿಗೆ ಹೋಗುತ್ತೇನೆ. ಯಾರಾದರೂ ದಯೆತೋರಿ ತಮ್ಮ ಹೊಲದಲ್ಲಿ ಹಕ್ಕಲನ್ನು ಆರಿಸಲು ಅನುಮತಿ ಕೊಡಬಹುದು” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು