Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:6 - ಪರಿಶುದ್ದ ಬೈಬಲ್‌

6 “ಒಬ್ಬನು ನಿಮ್ಮಿಂದ ಏನಾದರೊಂದು ವಸ್ತುವನ್ನು ಎರವಲಾಗಿ ತೆಗೆದುಕೊಳ್ಳುವುದಾದರೆ ಅವನ ಬೀಸುವ ಕಲ್ಲಿನ ಒಂದು ಭಾಗವನ್ನು ಒತ್ತೆಯಾಗಿಟ್ಟುಕೊಳ್ಳಬಾರದು. ಇಲ್ಲವಾದರೆ ಅವನ ಆಹಾರವನ್ನೇ ಅವನಿಂದ ಕಿತ್ತುಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಬೀಸುವ ಕಲ್ಲನ್ನು ಪೂರ್ತಿಯಾಗಲಿ, ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬೀಸುವಕಲ್ಲನ್ನು ಪೂರ್ತಿಯಾಗಲಿ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬೀಸುವ ಕಲ್ಲಿನಲ್ಲಿ ಅಡಿಗಲ್ಲನ್ನಾದರೂ, ಮೇಲಿನ ಕಲ್ಲನ್ನಾದರೂ ಒತ್ತೆಯಾಗಿ ತೆಗೆದುಕೊಳ್ಳಬಾರದು. ಹಾಗೆ ಮಾಡಿದರೆ, ಅದು ವ್ಯಕ್ತಿಯ ಜೀವನೋಪಾಯವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:6
9 ತಿಳಿವುಗಳ ಹೋಲಿಕೆ  

ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


“ನೀವು ಒಂದು ಪಟ್ಟಣವನ್ನು ಬಹುಕಾಲದಿಂದ ಮುತ್ತಿಗೆ ಹಾಕಿದರೆ ಸುತ್ತಮುತ್ತಲಿರುವ ಮರಗಳನ್ನು ಕಡಿದುಹಾಕಬಾರದು. ಅವುಗಳ ಫಲಗಳನ್ನು ತಿನ್ನಬಹುದು; ಆದರೆ ಕಡಿಯಬಾರದು. ಅವು ನಿಮ್ಮ ವೈರಿಗಳಲ್ಲವಲ್ಲಾ? ಅವು ನಿಮ್ಮೊಂದಿಗೆ ಯುದ್ಧ ಮಾಡುವುದಿಲ್ಲವಲ್ಲಾ?


ನಮ್ಮ ತಂದೆಗಂತೂ ಇವನನ್ನು ಕಂಡರೆ ಪ್ರಾಣಪ್ರೀತಿ. ಆದ್ದರಿಂದ ನಮ್ಮ ಈ ಕಿರಿಯ ತಮ್ಮನಿಲ್ಲದೆ ಹೋದರೆ,


ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.


ಇಬ್ಬರು ಹೆಂಗಸರು ಬೀಸುವ ಕಲ್ಲಿನಲ್ಲಿ ಧಾನ್ಯ ಬೀಸುತ್ತಿದ್ದರೆ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು ಮತ್ತೊಬ್ಬಳನ್ನು ಬಿಡಲಾಗುವುದು.


“ಒಬ್ಬನು ಹೊಸದಾಗಿ ಮದುವೆಯಾಗಿದ್ದಲ್ಲಿ ಅವನನ್ನು ಸೈನ್ಯಕ್ಕೆ ಕಳುಹಿಸಬಾರದು; ವಿಶೇಷವಾದ ಜವಾಬ್ದಾರಿಯನ್ನು ಅವನಿಗೆ ಕೊಡಬಾರದು. ಒಂದು ವರ್ಷ ಅವನು ಮನೆಯಲ್ಲಿದ್ದುಕೊಂಡು ತನ್ನ ಹೆಂಡತಿಯನ್ನು ಸಂತೋಷಪಡಿಸಬೇಕು.


“ಒಬ್ಬನು ಇನ್ನೊಬ್ಬ ಇಸ್ರೇಲನನ್ನು ಕದ್ದುಕೊಂಡು ಹೋಗಿ ಅವನನ್ನು ಗುಲಾಮನನ್ನಾಗಿ ಮಾರಬಾರದು. ಹಾಗೆ ಮಾಡಿದವನನ್ನು ಸಾಯಿಸಬೇಕು. ನಿಮ್ಮ ಕುಲದಿಂದ ಅಂಥಾ ಪಾಪವನ್ನು ತೆಗೆದುಹಾಕಬೇಕು.


ಯೋಬನೇ, ನೀನು ನಿಷ್ಕಾರಣವಾಗಿ ನಿನ್ನ ಸಹೋದರರ ವಸ್ತುಗಳನ್ನು ಒತ್ತೆಯಿಟ್ಟುಕೊಂಡು ಸಾಲ ಕೊಟ್ಟಿರಬಹುದು. ಜನರ ಬಟ್ಟೆಗಳನ್ನು ತೆಗೆದುಕೊಂಡು ಅವರನ್ನು ಬೆತ್ತಲೆ ಮಾಡಿರಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು