Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:8 - ಪರಿಶುದ್ದ ಬೈಬಲ್‌

8 “ನಿಮ್ಮಲ್ಲಿ ಯಾರಿಗಾದರೂ ಚರ್ಮರೋಗವಿದ್ದಲ್ಲಿ ಯಾಜಕನು ಹೇಳುವ ರೀತಿಯನ್ನು ಅನುಸರಿಸಬೇಕು. ನಾನು ಯಾಜಕರಿಗೆ ತಿಳಿಸಿದ ಮೇರೆಗೆ ನೀವು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕುಷ್ಠರೋಗಿಗಳ ವಿಷಯದಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವುದನ್ನೆಲ್ಲಾ ನೀವು ಜಾಗ್ರತೆಯಿಂದ ಕಾಪಾಡಿ ಕೈಗೊಳ್ಳುವ ಹಾಗೆ ನೋಡಿಕೊಳ್ಳಿ. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನು ನೀವು ಕಾಪಾಡಿ ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:8
11 ತಿಳಿವುಗಳ ಹೋಲಿಕೆ  

“ಚರ್ಮರೋಗವಿದ್ದು ವಾಸಿಯಾದ ಜನರು ಅನುಸರಿಸಬೇಕಾದ ನಿಯಮಗಳು ಇಂತಿವೆ. ಇವರನ್ನು ಶುದ್ಧೀಕರಣಕ್ಕಾಗಿ ಯಾಜಕನ ಬಳಿಗೆ ಕರೆದುಕೊಂಡು ಬಂದಾಗ ಅನುಸರಿಸತಕ್ಕ ನಿಯಮಗಳು ಯಾವುವೆಂದರೆ: “ಚರ್ಮರೋಗವಿದ್ದ ವ್ಯಕ್ತಿಯನ್ನು ಯಾಜಕನು ಪರೀಕ್ಷಿಸಬೇಕು.


ಯೇಸು ಅವರನ್ನು ನೋಡಿ, “ಹೋಗಿ, ನಿಮ್ಮನ್ನು ಯಾಜಕರಿಗೆ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಯಾಜಕರ ಬಳಿಗೆ ಹೋಗುತ್ತಿದ್ದಾಗ ಅವರಿಗೆ ವಾಸಿಯಾಯಿತು.


ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು.


ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.


ಆದರೆ ಬೂಷ್ಟು ಆ ತೊಗಲಿನ ಮೇಲೆ ಅಥವಾ ಬಟ್ಟೆಯ ಮೇಲೆ ಮರಳಿ ಬಂದರೆ, ಆಗ ಆ ಬೂಷ್ಟು ಹರಡುತ್ತಿದೆ ಎಂದರ್ಥ. ಆ ತೊಗಲನ್ನು ಅಥವಾ ಆ ಬಟ್ಟೆಯನ್ನು ಸುಟ್ಟುಹಾಕಬೇಕು.


ಯಾವಾಗಲೂ ಲೇವಿವಂಶದವರೇ ಯಾಜಕರಾಗಿರುವರು. ಆ ಯಾಜಕರು ಸದಾಕಾಲ ನನ್ನ ಎದುರಿನಲ್ಲಿ ನಿಂತುಕೊಂಡು ಸರ್ವಾಂಗಹೋಮ, ಧಾನ್ಯಸಮರ್ಪಣೆ ಮತ್ತು ಯಜ್ಞಗಳನ್ನು ಮಾಡುವರು.”


“ಯಾಜಕನು ದೋಷಪರಿಹಾರಕ ಯಜ್ಞಪಶುವಿನ ರಕ್ತದಿಂದ ಸ್ವಲ್ಪವನ್ನು ತೆಗೆದುಕೊಂಡು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.


ಅವು ಶುದ್ಧಾಶುದ್ಧ ಬೇಧವನ್ನು ತಿಳಿಸುವ ನಿಯಮಗಳಾಗಿವೆ. ಅವು ಆ ರೀತಿಯ ರೋಗಗಳ ಶುದ್ಧಾಚಾರದ ನಿಯಮಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು