Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:1 - ಪರಿಶುದ್ದ ಬೈಬಲ್‌

1 “ನಿಮ್ಮಲ್ಲಿ ಯಾರಿಗಾದರೂ ಇಬ್ಬರಿಗೆ ವಾಗ್ವಾದವಿದ್ದಲ್ಲಿ ಅವರು ಅದನ್ನು ನ್ಯಾಯಸ್ಥಾನಕ್ಕೆ ತೆಗೆದುಕೊಂಡು ಹೋಗಲಿ. ಅಲ್ಲಿ ನ್ಯಾಯಾಧೀಶರು ಯಾರು ಸರಿ ಯಾರು ತಪ್ಪು ಎಂದು ತೀರ್ಮಾನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:1
31 ತಿಳಿವುಗಳ ಹೋಲಿಕೆ  

ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.


ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.


ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?


ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.


ವ್ಯಾಜ್ಯಗಳಿಗೆ ತೀರ್ಪು ನೀಡುವ ನ್ಯಾಯಾಧಿಶರಾಗಿ ಯಾಜಕರು ಸೇವೆಮಾಡಬೇಕು ಮತ್ತು ನನ್ನ ಆಡಳಿತವನ್ನು ಆಧರಿಸಿ ಅವರು ತೀರ್ಪು ನೀಡಬೇಕು. ಅವರು ವಿಶೇಷವಾದ ಕೂಟಗಳನ್ನು ಏರ್ಪಡಿಸುವಾಗ ನನ್ನ ವಿಧಿನಿಯಮಗಳನ್ನು ಅನುಸರಿಸುವರು ಮತ್ತು ವಿಶೇಷವಾದ ಎಲ್ಲಾ ರಜಾದಿನಗಳನ್ನು ಮತ್ತು ಸಬ್ಬತ್ ದಿನಗಳನ್ನು ಅವರು ಗೌರವಿಸುವರು.


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


ಅವರಿಗೆ ಹಣಕೊಟ್ಟರೆ, ಅಪರಾಧಿಯನ್ನೂ ಬಿಟ್ಟುಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. ‘ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು


“ಕಳೆದುಹೋದ ಎತ್ತು, ಕತ್ತೆ, ಕುರಿ, ಬಟ್ಟೆಬರೆ, ಅಥವಾ ವಸ್ತುವಿನ ವಿಷಯದಲ್ಲಿ ಒಬ್ಬನು, ‘ಇದು ನನ್ನದು’ ಎಂದು ಹೇಳಿದರೆ ಮತ್ತು ಇನ್ನೊಬ್ಬನು, ‘ಇಲ್ಲ, ಇದು ನನ್ನದು’ ಎಂದು ಹೇಳಿದರೆ, ಇವರಿಬ್ಬರೂ ದೇವರ ಸನ್ನಿಧಿಗೆ ಹೋಗಬೇಕು. ತಪ್ಪಿತಸ್ಥನಾರೆಂದು ದೇವರು ತೀರ್ಮಾನಿಸುವನು. ತಪ್ಪಿತಸ್ಥನು ಇನ್ನೊಬ್ಬನಿಗೆ ಕಳೆದುಹೋದ ವಸ್ತುವಿನ ಬೆಲೆಯ ಎರಡರಷ್ಟನ್ನು ಕೊಡಬೇಕು.


ಅವರು ಹೇಳಿದ ಹಾಗೆ ಎಲ್ಲವನ್ನು ಅಕ್ಷರಶಃ ಪರಿಪಾಲಿಸಬೇಕು. ಅವರ ತೀರ್ಪನ್ನು ಬದಲಾಯಿಸಬಾರದು.


ನೀವು ಈಜಿಪ್ಟ್ ದೇಶದಲ್ಲಿ ಬಡ ಗುಲಾಮರಾಗಿದ್ದುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆದ್ದರಿಂದಲೇ ಬಡವರಿಗೆ ನೀವು ಹೀಗೆ ಮಾಡಬೇಕೆಂದು ನಿಮಗೆ ತಿಳಿಸುತ್ತಿದ್ದೇನೆ.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ, ಆ ವ್ಯಕ್ತಿಗೆ ತೀರ್ಪುನೀಡು. ಆ ವ್ಯಕ್ತಿಯು ತಪ್ಪಿತಸ್ಥನಾಗಿದ್ದರೆ, ಅವನು ತಪ್ಪಿತಸ್ಥನೆಂಬುದನ್ನು ನಮಗೆ ತೋರಿಸು. ಅವನು ನಿರಪರಾಧಿಯಾಗಿದ್ದರೆ ಅವನು ತಪ್ಪಿತಸ್ಥನಲ್ಲವೆಂಬುದನ್ನೂ ದಯವಿಟ್ಟು ನಮಗೆ ತೋರಿಸು.


ಆ ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು.


ಒಬ್ಬನು ಮತ್ತೊಬ್ಬನಿಗೆ ಅನ್ಯಾಯ ಮಾಡುವುದನ್ನು ಆತನು ಇಷ್ಟಪಡುವುದಿಲ್ಲ. ಆದರೆ ಕೆಲವರು ಆ ಕೆಟ್ಟಕಾರ್ಯಗಳನ್ನು ಮಹೋನ್ನತನಾದ ಯೆಹೋವನ ಎದುರಿನಲ್ಲಿಯೇ ಮಾಡುತ್ತಾರೆ.


ವ್ಯಾಜ್ಯದಲ್ಲಿ ದೊರೆಯಬೇಕಾದ ನ್ಯಾಯವನ್ನು ದೊರೆಯದಂತೆ ಮಾಡುವುದು ಯೆಹೋವನಿಗೆ ಇಷ್ಟವಿಲ್ಲ. ಯೆಹೋವನು ಈ ಸಂಗತಿಗಳಲ್ಲಿ ಯಾವುದನ್ನೂ ಇಷ್ಟಪಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು