Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:12 - ಪರಿಶುದ್ದ ಬೈಬಲ್‌

12 ಅಂಥವಳ ಕೈಯನ್ನು ಕಡಿದುಹಾಕಿರಿ; ದಯೆ ತೋರಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಅವಳನ್ನು ಕನಿಕರಿಸದೆ ಅವಳ ಕೈಯನ್ನು ಕಡಿದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವಳ ಕೈ ಕಡಿದುಹಾಕಿಸಬೇಕು; ಅವಳಿಗೆ ಕನಿಕರ ತೋರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಪರಪುರುಷನ ಪ್ರಧಾನ ಸ್ಥಾನವನ್ನು ಹಿಡಿದುಕೊಂಡರೆ ಕನಿಕರಿಸದೆ ಅವಳ ಕೈ ಕಡಿದುಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವಳ ಕೈಯನ್ನು ಕಡಿದುಹಾಕಬೇಕು. ಅವಳಿಗೆ ಕರುಣೆ ತೋರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:12
5 ತಿಳಿವುಗಳ ಹೋಲಿಕೆ  

ನೀವು ಅವನ ವಿಷಯದಲ್ಲಿ ದುಃಖಪಡಬಾರದು. ಯಾಕೆಂದರೆ ಅವನು ನಿರಪರಾಧಿಯನ್ನು ಕೊಂದ ಅಪರಾಧಿಯಾಗಿದ್ದಾನೆ. ಅವನು ಮಾಡಿದ ಪಾಪವನ್ನು ಇಸ್ರೇಲಿನಿಂದ ತೆಗೆದುಹಾಕಬೇಕು. ಆಗ ನಿಮಗೆ ಶುಭವಾಗುವುದು.


“ಅಪರಾಧ ಎಷ್ಟು ಭಯಂಕರವಾಗಿರುವುದೋ ಅಷ್ಟೇ ಭಯಂಕರ ಶಿಕ್ಷೆಯೂ ಇರಬೇಕು. ತಪ್ಪು ಮಾಡಿದವನನ್ನು ಶಿಕ್ಷಿಸಲು ಬೇಸರಪಟ್ಟುಕೊಳ್ಳಬಾರದು. ಒಬ್ಬನು ಪ್ರಾಣಹತ್ಯೆ ಮಾಡಿದರೆ ಅವನ ಪ್ರಾಣವೂ ತೆಗೆಯಲ್ಪಡಬೇಕು. ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಎಂಬ ನೀತಿಯನ್ನು ಅನುಸರಿಸಬೇಕು.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.


“ಇಬ್ಬರು ಗಂಡಸರು ಜಗಳವಾಡುತ್ತಿರುವಾಗ ಒಬ್ಬನ ಹೆಂಡತಿಯು ಗಂಡನಿಗೆ ಸಹಾಯಮಾಡಲಿಕ್ಕೆ ಬಂದು ಜಗಳವಾಡುವ ಇನ್ನೊಬ್ಬ ಗಂಡಸಿನ ಗುಪ್ತಾಂಗವನ್ನು ಹಿಡಿಯಬಾರದು.


ನೀವು ಅವನನ್ನು ಕೊಂದುಹಾಕಬೇಕು. ನೀವು ಕಲ್ಲೆಸೆದು ಅವನನ್ನು ಸಾಯಿಸಬೇಕು. ನೀವು ಅವನ ಮೇಲೆ ಮೊದಲನೆ ಕಲ್ಲನ್ನು ಎಸೆಯಬೇಕು. ಈಜಿಪ್ಟಿನ ದಾಸತ್ವದಿಂದ ನಿಮ್ಮನ್ನು ಬಿಡಿಸಿಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಡೆದುಕೊಳ್ಳುವಂತೆ ನಿಮ್ಮನ್ನು ಪ್ರೇರೇಪಿಸಿದವನು ಅವನೇ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು