Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:6 - ಪರಿಶುದ್ದ ಬೈಬಲ್‌

6 ಅವಳಿಗೆ ಅವನಿಂದ ಹುಟ್ಟುವ ಮೊದಲನೆಯ ಮಗು ಅವಳ ಮೊದಲನೆಯ ಗಂಡನಿಗೆ ಸೇರಿದ್ದೆಂದು ಪರಿಗಣಿಸಲ್ಪಡಬೇಕು. ಹೀಗೆ ಸತ್ತುಹೋದ ಅಣ್ಣನ ವಂಶವು ಮುಂದುವರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವಳಲ್ಲಿ ಹುಟ್ಟುವ ಚೊಚ್ಚಲುಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು; ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಯೇಲರಲ್ಲಿ ಅಳಿದು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವಳಲ್ಲಿ ಹುಟ್ಟುವ ಚೊಚ್ಚಲುಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು; ಹೀಗೆ ಆಗುವದರಿಂದ ಸತ್ತವನ ಹೆಸರು ಇಸ್ರಾಯೇಲ್ಯರೊಳಗಿಂದ ನಾಶವಾಗಿ ಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವಳು ಹೆರುವ ಚೊಚ್ಚಲ ಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು, ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರಲ್ಲಿ ಅಳಿದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:6
10 ತಿಳಿವುಗಳ ಹೋಲಿಕೆ  

ಆಗ ಅವನ ತಂದೆತಾಯಿಗಳು ಆ ಮಗನನ್ನು ಪಟ್ಟಣದ ಹಿರಿಯರು ಸೇರಿಬರುವ ಸ್ಥಳಕ್ಕೆ ಕರೆದುಕೊಂಡು ಹೋಗಿ


ಅವನನ್ನು ಸಂಪೂರ್ಣವಾಗಿ ನಾಶಮಾಡು. ಮುಂದಿನ ತಲೆಮಾರಿನಲ್ಲಿಯೇ ಅವನ ಹೆಸರು ಇಲ್ಲವಾಗಲಿ.


ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ.


ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ.


ಇವರನ್ನು ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಅವರ ಹೆಸರುಗಳನ್ನು ಯಾರೂ ನೆನಪಿನಲ್ಲಿಟ್ಟುಕೊಳ್ಳದಂತೆ ಮಾಡುತ್ತೇನೆ. ಆಮೇಲೆ ನಾನು ನಿನ್ನಿಂದ ಬಲಿಷ್ಠವಾದ ಮಹಾಜನಾಂಗವನ್ನು ನಿರ್ಮಿಸುತ್ತೇನೆ’ ಎಂದು ಹೇಳಿದನು.


ಆಗ ಯೆಹೂದನು ಏರನ ತಮ್ಮನಾದ ಓನಾನನಿಗೆ, “ಹೋಗು, ಸತ್ತುಹೋದ ನಿನ್ನ ಅಣ್ಣನ ಹೆಂಡತಿಗೆ ಗಂಡನಂತಿರು. ನಿನ್ನ ಮೂಲಕ ಆಕೆಯಲ್ಲಿ ಹುಟ್ಟುವ ಮಕ್ಕಳು ನಿನ್ನ ಅಣ್ಣನಾದ ಏರನ ಮಕ್ಕಳಾಗಿರಲಿ” ಎಂದು ಹೇಳಿದನು.


ತಾಮಾರಳಲ್ಲಿ ತನಗೆ ಹುಟ್ಟುವ ಮಕ್ಕಳು ತನ್ನವರಾಗುವುದಿಲ್ಲವೆಂದು ಅರಿತುಕೊಂಡು ಓನಾನನು ಆಕೆಯನ್ನು ಕೂಡಿದರೂ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು