ಧರ್ಮೋಪದೇಶಕಾಂಡ 25:7 - ಪರಿಶುದ್ದ ಬೈಬಲ್7 ಆದರೆ ಮೈದುನನು, ಸತ್ತುಹೋದ ತನ್ನ ಅಣ್ಣನ ಸ್ಥಾನವನ್ನು ತೆಗೆದುಕೊಳ್ಳಲು ಇಷ್ಟಪಡದೆಹೋದಲ್ಲಿ, ಆಕೆಯು ಊರಿನ ಹಿರಿಯರ ಬಳಿಗೆ ಹೋಗಿ ಹಿರಿಯರಿಗೆ ಹೀಗೆ ಹೇಳಬೇಕು: ‘ನನ್ನ ಮೈದುನನು ತನ್ನ ಅಣ್ಣನ ಹೆಸರನ್ನು ಇಸ್ರೇಲಿನಲ್ಲಿ ಉಳಿಸಲು ಇಷ್ಟಪಡುವುದಿಲ್ಲ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಲೊಲ್ಲದೆ ಹೋದರೆ ಅವಳು ಚಾವಡಿಗೆ ಹೋಗಿ ಹಿರಿಯರಿಗೆ, ‘ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸಲೊಲ್ಲನು; ಮೈದುನ ಧರ್ಮವನ್ನು ನಡಿಸುವುದಿಲ್ಲ ಎನ್ನುತ್ತಾನೆ’ ಎಂದು ತಿಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಲೊಲ್ಲದೆ ಹೋದರೆ ಅವಳು ಚಾವಡಿಗೆ ಹೋಗಿ ಹಿರಿಯರಿಗೆ - ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸಲೊಲ್ಲನು; ಮೈದುನ ಧರ್ಮವನ್ನು ನಡಿಸುವದಿಲ್ಲ ಅನ್ನುತ್ತಾನೆ ಎಂದು ತಿಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತೆಗೆದುಕೊಳ್ಳವ ಮನಸ್ಸಿಲ್ಲದಿದ್ದರೆ, ಅತ್ತಿಗೆಯು ಚಾವಡಿಗೆ ಹೋಗಿ ಹಿರಿಯರ ಹತ್ತಿರ ಬಂದು, “ನನ್ನ ಗಂಡನ ಸಹೋದರನು ತನ್ನ ಸಹೋದರನ ಹೆಸರನ್ನು ಇಸ್ರಾಯೇಲಿನಲ್ಲಿ ಮುಂದುವರಿಸಲು ಸಿದ್ಧನಿಲ್ಲ. ಅವನು ತನ್ನ ಮೈದುನನ ಕರ್ತವ್ಯವನ್ನು ನಡೆಸಲು ಮನಸ್ಸಿಲ್ಲದವನಾಗಿದ್ದಾನೆ,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |