ಧರ್ಮೋಪದೇಶಕಾಂಡ 26:10 - ಪರಿಶುದ್ದ ಬೈಬಲ್10 ಈಗ, ಯೆಹೋವನೇ, ನೀನು ಕೊಟ್ಟ ದೇಶದಲ್ಲಿ ಬೆಳೆದ ಬೆಳೆಯಲ್ಲಿ ಪ್ರಥಮ ಫಲಗಳನ್ನು ತಂದಿದ್ದೇನೆ.’ “ಆ ಪ್ರಥಮ ಬೆಳೆಯನ್ನು ನಿಮ್ಮ ದೇವರಾದ ಯೆಹೋವನ ಮುಂದೆ ಇಟ್ಟು ಆತನನ್ನು ಆರಾಧಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು” ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದುದರಿಂದ ಸರ್ವೇಶ್ವರಾ, ನೀವು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು’ ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿಟ್ಟು ಅವರನ್ನು ಆರಾಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂವಿುಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೀಗಿರುವುದರಿಂದ ಯೆಹೋವ ದೇವರೇ, ನೀವು ನಮಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿದ್ದೇವೆ,” ಎಂದು ಹೇಳಬೇಕು. ಆಗ ಅದನ್ನು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿಟ್ಟು, ಅವರನ್ನು ಆರಾಧಿಸಬೇಕು. ಅಧ್ಯಾಯವನ್ನು ನೋಡಿ |