ಧರ್ಮೋಪದೇಶಕಾಂಡ 26:11 - ಪರಿಶುದ್ದ ಬೈಬಲ್11 ನೀವೂ ನಿಮ್ಮ ಹೆಂಡತಿ ಮಕ್ಕಳೂ ಸೇರಿ ಅಲ್ಲಿ ಊಟಮಾಡಿ ಸಂತೋಷಿಸಬೇಕು. ನಿಮ್ಮ ಊರಿನಲ್ಲಿರುವ ಲೇವಿಯರೊಂದಿಗೆ ಮತ್ತು ಪರದೇಶಸ್ಥರೊಂದಿಗೆ ನಿಮ್ಮ ಪ್ರಥಮ ಫಲಗಳನ್ನು ಹಂಚಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರ ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲ ಸುಖ ಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯೆಯಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆತನು ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಮ್ಮ ದೇವರಾದ ಯೆಹೋವ ದೇವರು ನಿಮಗೂ ನಿಮ್ಮ ಮನೆಗೂ ಲೇವಿಯರಿಗೂ ನಿಮ್ಮ ಸಂಗಡ ಇರುವ ಪರವಾಸಿಗಳಿಗೂ ನೀಡಿರುವ ಸೌಲಭ್ಯಕ್ಕಾಗಿ ಸಂತೋಷ ಪಡಬೇಕು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.