Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:12 - ಪರಿಶುದ್ದ ಬೈಬಲ್‌

12 “ಪ್ರತೀ ಮೂರನೆಯ ವರ್ಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯರಿಗೂ ಕೊಡಬೇಕು. ಆಗ ಅವರಿಗೆ ಊಟಮಾಡಲು ಸಾಕಷ್ಟು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರು, ಪರದೇಶಿಗಳು, ತಾಯಿತಂದೆಯಿಲ್ಲದವರು ಹಾಗು ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ತಾಯಿತಂದೆಯಿಲ್ಲದವರೂ ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:12
11 ತಿಳಿವುಗಳ ಹೋಲಿಕೆ  

ಇಸ್ರೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನು ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ. ಇವರಿಗೆ ಇಸ್ರೇಲರೊಂದಿಗೆ ಪಾಲು ದೊರೆಯುವುದಿಲ್ಲವೆಂದು ನಾನು ಲೇವಿಯರ ಕುರಿತು ಹೇಳಿದ ಮಾತಿಗೆ ಇದೇ ಕಾರಣ” ಎಂದು ಹೇಳಿದನು.


“ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ.


ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ.


ಲೇವಿಯಕುಲದ ಜನರಲ್ಲಿ ಯಾಜಕರಾಗುವವರು ಯೆಹೂದ್ಯರಿಂದ ಹತ್ತನೆಯ ಒಂದು ಭಾಗವನ್ನು ಪಡೆಯಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ಯಾಜಕರು ತಮ್ಮ ಸ್ವಂತ ಜನರಿಂದಲೇ (ಯೆಹೂದ್ಯರು) ಅದನ್ನು ಸಂಗ್ರಹಿಸುತ್ತಾರೆ ಮತ್ತು ಅವರ ಜನರು ಅಬ್ರಹಾಮನ ಕುಟುಂಬಕ್ಕೆ ಸೇರಿದವರಾಗಿದ್ದಾರೆ.


ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.


ಲೇವಿಯರು ಜನರಿಂದ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುತ್ತಾರೆ. ಆದರೆ ಅಬ್ರಹಾಮನು ಮೆಲ್ಕಿಜೆದೇಕನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನೆಂದರೆ, ಲೇವಿಯೂ ಕೊಟ್ಟಂತಾಯಿತೆಂದು ಹೇಳಬಹುದು.


ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು.


ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು