ಧರ್ಮೋಪದೇಶಕಾಂಡ 26:13 - ಪರಿಶುದ್ದ ಬೈಬಲ್13 ನಿನ್ನ ದೇವರಾದ ಯೆಹೋವನಿಗೆ ನೀನು ಹೀಗೆ ಹೇಳಬೇಕು: ‘ನನ್ನ ಮನೆಯೊಳಗಿಂದ ನನ್ನ ಬೆಳೆಯ ಪರಿಶುದ್ಧ ಭಾಗವನ್ನು ತೆಗೆದು ಲೇವಿಯರಿಗೆ, ಪರದೇಶಸ್ಥರಿಗೆ, ಅನಾಥರಿಗೆ, ವಿಧವೆಯರಿಗೆ ಕೊಟ್ಟಿರುತ್ತೇನೆ. ನಿನ್ನ ಕಟ್ಟಳೆಗಳನ್ನೆಲ್ಲಾ ಅನುಸರಿಸಿದ್ದೇನೆ. ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನಿರಾಕರಿಸಲಿಲ್ಲ, ನಾನು ಅವುಗಳನ್ನು ಮರೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ‘ನಾವು ಮೀಸಲಾದ ವಸ್ತುಗಳನ್ನು ಮನೆಯಿಂದ ತೆಗೆದುಬಿಟ್ಟಿದ್ದೇವೆ; ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯನಿಗೆ, ಪರದೇಶಿಗೆ, ತಾಯಿತಂದೆ ಇಲ್ಲದ ವ್ಯಕ್ತಿಗೆ, ವಿಧವೆಗೆ ಇಂಥವರಿಗೆ ಕೊಟ್ಟು ಇದ್ದೇವೆ, ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ನಾವು ಮೀಸಲಾದ ವಸ್ತುಗಳನ್ನು ಮನೆಯಿಂದ ತೆಗೆದುಬಿಟ್ಟಿದ್ದೇವೆ; ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯ, ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೆ ಕೊಟ್ಟಿದ್ದೇವೆ; ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲೂ ಇಲ್ಲ ಮರೆಯಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, “ನಾವು ಮೀಸಲಿಟ್ಟ ಪರಿಶುದ್ಧ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದು, ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರಿಗೆ, ಪರದೇಶಿಗೆ, ತಂದೆತಾಯಿ ಇಲ್ಲದವರಿಗೆ, ವಿಧವೆಯರಿಗೆ ಕೊಟ್ಟಿದ್ದೇವೆ. ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.