Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:14 - ಪರಿಶುದ್ದ ಬೈಬಲ್‌

14 ನಾನು ದುಃಖದಲ್ಲಿರುವಾಗ ಆ ಆಹಾರವನ್ನು ಊಟಮಾಡಲಿಲ್ಲ. ಈ ಬೆಳೆಯನ್ನು ಶೇಖರಿಸುವಾಗ ನಾನು ಅಶುದ್ಧನಾಗಿರಲಿಲ್ಲ. ಸತ್ತವರಿಗಾಗಿ ಈ ಆಹಾರವನ್ನು ಅರ್ಪಿಸಲಿಲ್ಲ. ನನ್ನ ದೇವರಾದ ಯೆಹೋವನೇ, ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. ನೀನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ನಾನು ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾವು ಸತ್ತವರಿಗಾಗಿ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದು ಹಾಕಲಿಲ್ಲ; ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಟ್ಟು ನೀವು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವು [ಸತ್ತವರಿಗೋಸ್ಕರ] ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇವಿುಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:14
14 ತಿಳಿವುಗಳ ಹೋಲಿಕೆ  

ಆದರೆ ಒಬ್ಬನು ಅಶುದ್ಧನಾಗಿದ್ದು ಯೆಹೋವನಿಗೆ ಸೇರಿದ ಸಮಾಧಾನ ಸಮರ್ಪಣೆಗಳ ಮಾಂಸವನ್ನು ತಿಂದರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.


ಇಸ್ರೇಲರು ಯೆಹೋವನಿಗೆ ದ್ರಾಕ್ಷಾರಸದ ಸಮರ್ಪಣೆ ಮಾಡುವದಿಲ್ಲ. ಆತನಿಗೆ ಯಜ್ಞವನ್ನರ್ಪಿಸುವದಿಲ್ಲ. ಅವರ ಯಜ್ಞಗಳು ಸಮಾಧಿಗಳಲ್ಲಿ ಉಣ್ಣುವ ಆಹಾರದಂತಿರುವದು. ಅದನ್ನು ಯಾವನಾದರೂ ಉಂಡಲ್ಲಿ ಅವನು ಅಶುದ್ಧನಾಗುವನು. ಅವರ ರೊಟ್ಟಿಯು ದೇವರ ಆಲಯದೊಳಗೆ ಇಡಲ್ಪಡುವದಿಲ್ಲ. ಅವರೇ ಅದನ್ನು ತಿನ್ನಬೇಕು.


ಅವನು ಹೆಣವನ್ನು ಮುಟ್ಟಿ ತನ್ನನ್ನು ಅಶುದ್ಧನನ್ನಾಗಿ ಮಾಡಿಕೊಳ್ಳಬಾರದು. ಅದು ಅವನ ತಂದೆಯ ಶವವಾಗಿದ್ದರೂ ಸರಿ, ಅಥವಾ ತಾಯಿಯ ಶವವಾಗಿದ್ದರೂ ಸರಿ, ಅವನು ಅದರ ಬಳಿಗೆ ಹೋಗಬಾರದು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಈ ಸಂಗತಿಗಳನ್ನು ಹೇಳು: ಯಾಜಕನು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.


ಬಳಿಕ ಬಾಳ್ ಪೆಗೋರಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು. ಜೀವವಿಲ್ಲದ ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು.


ನೀವು ಅತ್ತು ಗೋಳಾಡಿ ಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ.


ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.”


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ನಿನ್ನ ದೇವರಾದ ಯೆಹೋವನಿಗೆ ನೀನು ಹೀಗೆ ಹೇಳಬೇಕು: ‘ನನ್ನ ಮನೆಯೊಳಗಿಂದ ನನ್ನ ಬೆಳೆಯ ಪರಿಶುದ್ಧ ಭಾಗವನ್ನು ತೆಗೆದು ಲೇವಿಯರಿಗೆ, ಪರದೇಶಸ್ಥರಿಗೆ, ಅನಾಥರಿಗೆ, ವಿಧವೆಯರಿಗೆ ಕೊಟ್ಟಿರುತ್ತೇನೆ. ನಿನ್ನ ಕಟ್ಟಳೆಗಳನ್ನೆಲ್ಲಾ ಅನುಸರಿಸಿದ್ದೇನೆ. ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನಿರಾಕರಿಸಲಿಲ್ಲ, ನಾನು ಅವುಗಳನ್ನು ಮರೆಯಲಿಲ್ಲ.


ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆಶೀರ್ವದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆಶೀರ್ವದಿಸು. ಸಮೃದ್ಧಿಯಿಂದ ಕೂಡಿದ ಈ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’


ಸತ್ತವರಿಗಾಗಿ ಗೋಳಾಡುವವರ ಸಲುವಾಗಿ ಯಾರೂ ಆಹಾರವನ್ನು ತರುವದಿಲ್ಲ. ತಾಯಿಯನ್ನಾಗಲಿ ತಂದೆಯನ್ನಾಗಲಿ ಕಳೆದುಕೊಂಡವರಿಗೆ ಯಾರೂ ಸಮಾಧಾನವನ್ನು ಹೇಳುವದಿಲ್ಲ. ಸತ್ತವರಿಗಾಗಿ ಅಳುವವರನ್ನು ಸಮಾಧಾನಪಡಿಸಲು ಯಾರೂ ಪಾನಪಾತ್ರೆಯನ್ನು ನೀಡುವದಿಲ್ಲ.


ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.


ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿದ್ದಲ್ಲಿ, ಆತನ ವಿಧಿಕ್ರಮಗಳಿಗೆ ವಿಧೇಯರಾಗಿದ್ದಲ್ಲಿ ದೇವರು ನಿಮ್ಮನ್ನು ಆಶೀರ್ವದಿಸುವನು.


ನಾನು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಯಾವಾಗಲೂ ಜ್ಞಾಪಿಸಿಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು