Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:15 - ಪರಿಶುದ್ದ ಬೈಬಲ್‌

15 ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆಶೀರ್ವದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆಶೀರ್ವದಿಸು. ಸಮೃದ್ಧಿಯಿಂದ ಕೂಡಿದ ಈ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀವು ನಿಮ್ಮ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಯೇಲರನ್ನು ಹಾಗು ಹಾಲೂಜೇನೂ ಹರಿಯುವ ನಾಡೆಂದು ನೀವು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂಮಿಯನ್ನು ಆಶೀರ್ವದಿಸಿ, ದೇವರೇ,’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ನಿನ್ನ ಪರಿಶುದ್ಧವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ ನಿನ್ನ ಜನರಾದ ಇಸ್ರಾಯೇಲ್ಯರನ್ನೂ ಹಾಲೂ ಜೇನೂ ಹರಿಯುವ ದೇಶವೆಂದು ನೀನು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂವಿುಯನ್ನೂ ಆಶೀರ್ವದಿಸು ದೇವರೇ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:15
26 ತಿಳಿವುಗಳ ಹೋಲಿಕೆ  

ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ?


ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.


‘ಪ್ರಭುವು ಹೀಗೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!


ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’


ನಿನ್ನ ನಿವಾಸವಾದ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು, ಅನ್ಯ ಸ್ಥಳದವರಾದ ಆ ಜನರು ನಿನ್ನಲ್ಲಿ ಬೇಡುವುದನ್ನೆಲ್ಲ ದಯವಿಟ್ಟು ಈಡೇರಿಸು. ಆಗ, ಇಸ್ರೇಲಿನ ಜನರಂತೆ ಭೂಲೋಕದವರೆಲ್ಲರಿಗೂ ನಿನ್ನ ಹೆಸರು ಗೊತ್ತಾಗುವುದು ಮತ್ತು ಅವರು ನಿನಗೆ ಭಯಪಡುವರು. ಈ ಆಲಯವನ್ನು ನಿನ್ನ ಗೌರವಕ್ಕಾಗಿ ನಾನು ಕಟ್ಟಿಸಿದೆನೆಂಬುದು ಆಗ ಎಲ್ಲಾ ಕಡೆಯ ಜನರಿಗೂ ತಿಳಿಯುವುದು.


“ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.


ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ಹೆಸರು ಪರಿಶುದ್ಧವಾಗಿರಲಿ.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ನಮ್ಮ ದೇವರಾದ ಯೆಹೋವನೇ, ನಮಗೆ ಕರುಣೆತೋರು. ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ; ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ.


ಚೀಯೋನಿಗೆ ಕರುಣೆತೋರಿ ಜೆರುಸಲೇಮಿನ ಕೋಟೆಗಳನ್ನು ಮತ್ತೆ ನಿರ್ಮಿಸು.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.


ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಟ್ಟೆವು. ಆತನು ನಮ್ಮ ಕೂಗನ್ನು ಆಲಿಸಿದನು; ನಮ್ಮ ಸಂಕಟ, ವೇದನೆಗಳನ್ನು ನೋಡಿದನು.


ಅಲ್ಲಿಂದ ನಮ್ಮನ್ನು ಕರೆದುತಂದು ನಮಗೆ ಈ ಒಳ್ಳೆಯ ದೇಶವನ್ನು ಕೊಟ್ಟನು.


ನಾನು ದುಃಖದಲ್ಲಿರುವಾಗ ಆ ಆಹಾರವನ್ನು ಊಟಮಾಡಲಿಲ್ಲ. ಈ ಬೆಳೆಯನ್ನು ಶೇಖರಿಸುವಾಗ ನಾನು ಅಶುದ್ಧನಾಗಿರಲಿಲ್ಲ. ಸತ್ತವರಿಗಾಗಿ ಈ ಆಹಾರವನ್ನು ಅರ್ಪಿಸಲಿಲ್ಲ. ನನ್ನ ದೇವರಾದ ಯೆಹೋವನೇ, ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. ನೀನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ನಾನು ಮಾಡಿದ್ದೇನೆ.


ಯಾಜಕರು ಮತ್ತು ಲೇವಿಯರು ಎದ್ದುನಿಂತು ಜನರನ್ನು ಯೆಹೋವನು ಆಶೀರ್ವದಿಸುವಂತೆ ಕೇಳಿಕೊಂಡರು. ದೇವರು ಪರಲೋಕದ ತನ್ನ ಪವಿತ್ರ ನಿವಾಸಕ್ಕೆ ಬಂದ ಆ ಪ್ರಾರ್ಥನೆಗೆ ಕಿವಿಗೊಟ್ಟನು.


ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ.


ಸೇನಾಧೀಶ್ವರನಾದ ದೇವರೇ, ಹಿಂತಿರುಗಿ ಬಾ. ಪರಲೋಕದಿಂದ ನಿನ್ನ “ದ್ರಾಕ್ಷಾಲತೆ”ಯನ್ನು ನೋಡಿ ಅದನ್ನು ಸಂರಕ್ಷಿಸು.


ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.


ನಿನ್ನ ಸ್ವಂತ ಕೈಗಳಿಂದ ನೀನು ನೆಟ್ಟ “ದ್ರಾಕ್ಷಾಲತೆ”ಯನ್ನು ನೋಡು. ನೀನು ಬೆಳೆಸಿದ ಎಳೆ ಸಸಿಯನ್ನು ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು