ಧರ್ಮೋಪದೇಶಕಾಂಡ 26:16 - ಪರಿಶುದ್ದ ಬೈಬಲ್16 “ಈ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅನುಸರಿಸಲು ನಿಮ್ಮ ದೇವರಾದ ಯೆಹೋವನು ಇಂದು ನಿಮಗೆ ಆಜ್ಞಾಪಿಸುತ್ತಾನೆ. ನಿಮ್ಮ ಪೂರ್ಣಹೃದಯದಿಂದಲೂ ಆತ್ಮದಿಂದಲೂ ಅವುಗಳನ್ನು ಎಚ್ಚರಿಕೆಯಿಂದ ಅನುಸರಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದುದರಿಂದ ನೀವು ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಈ ತೀರ್ಪುಗಳನ್ನೂ ನಿಯಮಗಳನ್ನೂ ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದ್ದರಿಂದ ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.