ಧರ್ಮೋಪದೇಶಕಾಂಡ 26:17 - ಪರಿಶುದ್ದ ಬೈಬಲ್17 ಯೆಹೋವನು ನಿಮ್ಮ ದೇವರೆಂದು ನೀವು ಈ ದಿನ ಪ್ರತಿಜ್ಞೆ ಮಾಡಿದ್ದೀರಿ. ಆತನು ಹೇಳಿದ ಎಲ್ಲಾ ಕಟ್ಟಳೆ, ವಿಧಿ, ನಿಯಮಗಳನ್ನು ಅನುಸರಿಸುವಿರೆಂದು ಪ್ರತಿಜ್ಞೆ ಮಾಡಿರುತ್ತೀರಿ. ಆತನು ಹೇಳಿದ್ದನ್ನೆಲ್ಲಾ ಮಾಡುವುದಾಗಿ ಹೇಳಿರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಮಗೆ ಸರ್ವೇಶ್ವರನೇ ದೇವರಾಗಿರುವರೆಂದು ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಅವರ ಮಾತಿಗೆ ಲಕ್ಷ್ಯಕೊಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಮಗೆ ಯೆಹೋವನೇ ದೇವರಾಗಿರುವನೆಂದೂ ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಆತನ ಮಾತಿಗೆ ಲಕ್ಷ್ಯವಿಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀವು ಈ ಹೊತ್ತು, ಯೆಹೋವ ದೇವರೇ ನಮಗೆ ದೇವರು ಎಂದೂ, ಅವರ ಮಾರ್ಗಗಳಲ್ಲಿ ನಡೆದು, ಅವರು ಹೇಳಿದ ಆಜ್ಞಾವಿಧಿನಿಯಮಗಳನ್ನು ಪಾಲಿಸಿ, ಅವರ ಮಾತಿಗೆ ವಿಧೇಯರಾಗಿರುತ್ತೇವೆ ಎಂದೂ ದೃಢವಾಗಿ ಹೇಳಿದ್ದೀರಿ. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”